Sunday, July 26, 2026
spot_imgspot_img
spot_imgspot_img

ಫರಂಗಿಪೇಟೆ: ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ: ಆರೋಪಿಯ ಬಂಧನ..!

- Advertisement -
- Advertisement -

ಬಂಟ್ವಾಳ: ಪಕ್ಕದ ಮನೆಯ ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣದಲ್ಲಿ ಯುವಕನೋರ್ವನ ಮೇಲೆ ಪೋಕ್ಸೋ ಪ್ರಕರಣ ದಾಖಲಾದ ಘಟನೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಫರಂಗಿಪೇಟೆಯಲ್ಲಿ ನಡೆದಿದೆ.

ಆರೋಪಿಯನ್ನು ಮುಸ್ತಫಾ (32) ಎಂದು ಗುರುತಿಸಲಾಗಿದೆ.

vtv vitla
vtv vitla

ಮೀನು ವ್ಯಾಪಾರಿಯಾಗಿದ್ದ, ಈತ ತನ್ನ ಪಕ್ಕದ ಮನೆಯ ಅಪ್ರಾಪ್ತೆಯನ್ನು ಫರಂಗಿಪೇಟೆಯ ಅಂಚೆ ಕಚೇರಿಯ ಬಳಿ ಕರೆದುಕೊಂಡು ಹೋಗಿ ಲೈಂಗಿಕ ಕಿರುಕುಳ ನೀಡಿದ್ದಾನೆ.

ಈ ಬಗ್ಗೆ ಬಾಲಕಿಯ ಹೆತ್ತವರು ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಶನಿವಾರ ದೂರು ದಾಖಲಿಸಿದ್ದಾರೆ. ಈತ ತೀವ್ರ ಗಾಂಜಾ ವ್ಯಸನಿಯಾಗಿದ್ದ ಎಂದು ತಿಳಿದು ಬಂದಿದೆ. ಸದ್ಯ
ಪೊಲೀಸರು ಮುಸ್ತಫಾನನ್ನು ಬಂಧಿಸಿದ್ದಾರೆ.

vtv vitla
vtv vitla
- Advertisement -

Related news

error: Content is protected !!