Sunday, June 14, 2026
spot_imgspot_img
spot_imgspot_img

ಬಂಟ್ವಾಳ : ಕಾಂಗ್ರೆಸ್ ಘಟಕಗಳ ಸಂಯುಕ್ತ ಆಶ್ರಯದಲ್ಲಿ ಗೋಪೂಜಾ ಕಾರ್ಯಕ್ರಮ

- Advertisement -
- Advertisement -

ಬಂಟ್ವಾಳ : ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್, ಮಹಿಳಾ ಕಾಂಗ್ರೆಸ್, ಯುವ ಕಾಂಗ್ರೆಸ್ ಮತ್ತು ಮುಂಚೂಣಿ ಘಟಕಗಳ ಸಂಯುಕ್ತ ಆಶ್ರಯದಲ್ಲಿ, ಬಂಟ್ವಾಳ ತಾಲೂಕು ಮಾಣಿ ಗ್ರಾಮದ ಮಾಣಿ-ಉದ್ದ ವಸಂತ ಶೆಟ್ಟಿಯವರ ಮನೆಯಲ್ಲಿ ದೀಪಾವಳಿಯ ಪ್ರಯುಕ್ತ ಗೋಪೂಜಾ ಕಾರ್ಯಕ್ರಮ ವೈದಿಕ ವಿಧಿ ವಿಧಾನಗಳೊಂದಿಗೆ, ಮಾಜಿ ಸಚಿವ ಬಿ.ರಮಾನಾಥ ರೈ ಯವರ ಮಾರ್ಗದರ್ಶನದಲ್ಲಿ ನಡೆಯಿತು.


ಮಾಜಿ ಜಿ.ಪಂ ಸದಸ್ಯ ಚಂದ್ರಪ್ರಕಾಶ ಶೆಟ್ಟಿ ತುಂಬೆ, ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸುದೀಪ್ ಕುಮಾರ್ ಶೆಟ್ಟಿ, ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬೇಬಿ ಕುಂದರ್, ಮಾಣಿ ಗ್ರಾಮ ಪಂಚಾಯತ್ ಅಧ್ಯಕ್ಷ ಬಾಲಕೃಷ್ಣ ಆಳ್ವ ಕೊಡಾಜೆ, ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಜಯಂತಿ ಪೂಜಾರಿ, ಜಿಲ್ಲಾ ಮಹಿಳಾ ಕಾಂಗ್ರೆಸ್ ಉಪಾಧ್ಯಕ್ಷೆ ಮಲ್ಲಿಕಾ ಪಕ್ಕಳ, ಮಾಜಿ ತಾ.ಪಂ.ಸದಸ್ಯ ಕುಶಲ.ಎಂ.ಪೆರಾಜೆ, ಪ್ರಮುಖರಾದ ರಾಜ್ ಕಮಲ್ ಹೆಗ್ಡೆ, ರಾಮಣ್ಣ ಶೆಟ್ಟಿ, ಪ್ರಸನ್ನ ಕಾಮತ್ ಕಡೆಕ್ಕನ, ನಾಗರಾಜ ಪೂಜಾರಿ, ವಿಕೇಶ್ ಶೆಟ್ಟಿ, ಗಿರೀಶ್ ಪೂಜಾರಿ, ಸುಧಾಕರ ಶೆಟ್ಟಿ, ಶರತ್ ಶೆಟ್ಟಿ, ವಿಲಾಸ್ ಶೆಟ್ಟಿ, ರವೀಂದ್ರ ಪೂಜಾರಿ ದಡಿಕೆಮಾರು, ಹರೀಶ್ ಶೆಟ್ಟಿ, ಪ್ರವೀಣ್ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು.

- Advertisement -

Related news

error: Content is protected !!