


ಬಂಟ್ವಾಳ: ಯುವಕನೋರ್ವನಿಗೆ ಚೂರಿಯಿಂದ ಇರಿದು ಗಾಯಗೊಳಿಸಿದ ಘಟನೆ ಪಾಣೆಮಂಗಳೂರು ಎಂಬಲ್ಲಿ ನಡೆದಿದೆ.
ಪಾಣೆಮಂಗಳೂರು ಅಕ್ಕರಂಗಡಿ ನಿವಾಸಿ ಸುಲೈಮಾನ್ ಎಂಬವನಿಗೆ ಆತನ ಪರಿಚಯಸ್ಥ ಚೂರಿದು ಇರಿದು ಪರಾರಿಯಾಗಿದ್ದಾನೆ ಎಂದು ಹೇಳಲಾಗಿದೆ. ನಿಸಾರ್ ನೆಹರು ನಗರ ನಿವಾಸಿಯಾಗಿದ್ದು , ಗಾಂಜಾ ವ್ಯಸನಿಗಳಾಗಿದ್ದಾನೆ ಎನ್ನಲಾಗಿದೆ. ಈತನ ವಿರುದ್ದ ನಗರ ಪೋಲೀಸ್ ಠಾಣೆಯಲ್ಲಿ ಅನೇಕ ಪ್ರಕರಣಗಳಿದ್ದು , ಇತ್ತೀಚೆಗಷ್ಟೇ ಪ್ರಕರಣವೊಂದರಲ್ಲಿ ಜೈಲು ಪಾಲಾಗಿ ಬಿಡುಗಡೆಯಾಗಿದ್ದ ಎನ್ನಲಾಗಿದೆ.
ಮಧ್ಯಾಹ್ನ ಸುಮಾರು 1.30 ಗಂಟೆ ವೇಳೆ ಇವರಿಬ್ಬರು ನೆಹರುನಗರದ ಬಳಿ ಬಂದಿದ್ದು , ಕ್ಷುಲ್ಲಕ ಕಾರಣಕ್ಕಾಗಿ ಮಾತಿಗೆ ಮಾತು ಬೆಳೆದು ನಿಸಾರ್ ಸುಲೈಮಾನ್ ಗೆ ಚೂರಿಯಿಂದ ಎದೆಯ ಭಾಗಕ್ಕೆ ತಿವಿದಿದ್ದಾನೆ ಎನ್ನಲಾಗಿದೆ. ಗಾಯಗೊಂಡ ಸುಲೈಮಾನ್ ನನ್ನು ತುಂಬೆ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾನೆ ಎಂದು ತಿಳಿದು ಬಂದಿದೆ. ಘಟನಾ ಸ್ಥಳಕ್ಕೆ ಬಂಟ್ವಾಳ ನಗರ ಠಾಣಾ ಪೋಲೀಸ್ ಇನ್ಸ್ ಪೆಕ್ಟರ್ ವಿವೇಕಾನಂದ ಅವರು ಭೇಟಿ ನೀಡಿದ್ದಾರೆ. ಆರೋಪಿ ನಿಸಾರ್ ನನ್ನು ಬಂಧಿಸಲು ಪೋಲೀಸರು ಬಲೆ ಬೀಸಿದ್ದಾರೆ ಎನ್ನಲಾಗಿದೆ.








