Monday, September 21, 2026
spot_imgspot_img
spot_imgspot_img

ಬಂಟ್ವಾಳ: ಬೆಂಕಿ ತಗುಲಿ ಆಸ್ಪತ್ರೆಗೆ ದಾಖಲಾಗಿದ್ದ ಮಹಿಳೆ ಚಿಕಿತ್ಸೆ ಫಲಕಾರಿಯಾಗದೆ ಮೃತ್ಯು

- Advertisement -
- Advertisement -

ಬಂಟ್ವಾಳ: ಬೆಂಕಿ ತಗುಲಿ ಚಿಂತಾಜನಕ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದ ಮಹಿಳೆಯೋರ್ವಳು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ಜೂನ್ 6ರಂದು ಮಧ್ಯ ರಾತ್ರಿ ವೇಳೆ ನಡೆದಿದೆ.

ಅಮ್ಮುಂಜೆ ಗ್ರಾಮದ ಶಿವಾಜಿನಗರ ನವಗ್ರಾಮ ಸೈಟ್ ನಿವಾಸಿ ಪದ್ಮನಾಭ ಪೂಜಾರಿ ಅವರ ಪತ್ನಿ ಗಿರಿಜಾ(57) ಮೃತ ಮಹಿಳೆ. ಮೇ.30 ರಂದು ಸಂಜೆ ವೇಳೆ ಗಿರಿಜಾ ಅವರು ಸ್ನಾನ ಮಾಡಲು ಬಿಸಿ ನೀರು ಕಾಯಿಸಲು ಬಚ್ಚಲು ಕೊಟ್ಟಿಗೆಯ ಒಲೆಗೆ ಬೆಂಕಿ ಹಾಕುತ್ತಿದ್ದ ವೇಳೆ ತೆಂಗಿನ ಗರಿಯಿಂದ ಬೆಂಕಿ ಗಿರಿಜಾ ಅವರ ಉಟ್ಟ ಸೀರೆಗೆ ತಗುಲಿತ್ತು.

ಇದರಿಂದ ಗಂಭೀರ ಸ್ಥಿತಿಯಲ್ಲಿದ್ದ ಅವರನ್ನು ಮಂಗಳೂರು ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲ ನೀಡದೆ ಅವರು ಸೋಮವಾರ ಮಧ್ಯ ರಾತ್ರಿ ವೇಳೆ ಮೃತಪಟ್ಟಿದ್ದಾರೆ. ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Related news

error: Content is protected !!