Saturday, June 28, 2025
spot_imgspot_img
spot_imgspot_img

ಬಂಟ್ವಾಳ: ಮನೆಗೆ ನುಗ್ಗಿ 1.20 ಲಕ್ಷ ಮೌಲ್ಯದ ಚಿನ್ನಾಭರಣ ದೋಚಿದ ಕಳ್ಳರು

- Advertisement -
- Advertisement -

ಬಂಟ್ವಾಳ: ಮನೆಗೆ ನುಗ್ಗಿ ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣಗಳನ್ನು ಕಳವುಗೈದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದ ಪುಂಜಾಲಕಟ್ಟೆ ಪೊಲೀಸ್ ಠಾಣಾ ವ್ಯಾಪ್ತಿಯ ಕುಕ್ಕಳ ಗ್ರಾಮದ ಒಳಬೈಲು ಎಂಬಲ್ಲಿ ನಡೆದಿದೆ.

ಇಲ್ಲಿನ ಒಳಬೈಲು ನಿವಾಸಿಯಾಗಿರುವ ಸಿಲ್ವಿಯಾ ಫರ್ನಾಂಡೀಸ್ ಎಂಬವರ ಮನೆಗೆ ನುಗ್ಗಿದ ಕಳ್ಳರು ಕಪಾಟಿನಲ್ಲಿದ್ದ 25 ಗ್ರಾಂ ಚಿನ್ನವನ್ನು ಕಳವುಗೈದಿದ್ದಾರೆ.

ರಾತ್ರಿ ವೇಳೆ ಮನೆಯಲ್ಲಿ ಯಾರು ಇಲ್ಲದ ಬಗ್ಗೆ ಮಾಹಿತಿಯನ್ನು ಖಚಿತ ಪಡಿಸಿಕೊಂಡ ಕಳ್ಳರು ತಮ್ಮ ಕೈ ಚಳಕ ಮೆರೆದಿದ್ದಾರೆ. 1.20 ಲಕ್ಷ ಮೌಲ್ಯದ ಎರಡು ಉಂಗುರ, ಎರಡು ಕಿವಿಯೋಲೆಯನ್ನು ಕಳವು ಮಾಡಿದ್ದಾರೆ. ಶ್ವಾನದಳ, ಬೆರಳಚ್ಚು ತಜ್ಞರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪುಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Related news

error: Content is protected !!