Friday, June 19, 2026
spot_imgspot_img
spot_imgspot_img

ಬಂಟ್ವಾಳ: ರೈಲು ಡಿಕ್ಕಿಯಾಗಿ ವ್ಯಕ್ತಿ ದುರ್ಮರಣ

- Advertisement -
- Advertisement -

ಬಂಟ್ವಾಳ: ರೈಲು ಡಿಕ್ಕಿಯಾಗಿ ವ್ಯಕ್ತಿಯೋರ್ವ ಮೃತಪಟ್ಟ ಘಟನೆ ಬಂಟ್ವಾಳ ನಗರ ಪೊಲೀಸ್ ಠಾಣಾ ಪುರಸಭಾ ವ್ಯಾಪ್ತಿಯ ಮೊಡಂಕಾಪು ಎಂಬಲ್ಲಿ ನಡೆದಿದೆ. ಮೃತಪಟ್ಟ ವ್ಯಕ್ತಿಯನ್ನು ಮಂಡಾಡಿ ನಿವಾಸಿ ಪ್ರವೀಣ್ ಪೂಜಾರಿ (40) ಎಂದು ಗುರುತಿಸಲಾಗಿದೆ.

ಪ್ರವೀಣ್ ಅವರು ಕೆಲಕಾಲದಿಂದ ಮಾನಸಿಕ ಅಸ್ವಸ್ಥತೆಯಿಂದ ಬಳಲುತ್ತಿದ್ದರು ಎನ್ನಲಾಗಿದೆ. ರೈಲ್ವೆ ಹಳಿಯ ಬದಿಯಲ್ಲಿ ನಡೆದುಕೊಂಡು ಹೋಗುತ್ತಿರಬೇಕು ಎಂದು ಶಂಕಿಸಲಾಗಿದೆ.


ಈತನ ತಲೆಗೆ ಬಲವಾದ ರೈಲಿನ ಏಟು ಬಿದ್ದ ರಕ್ತ ಸೋರಿಕೆಯಿಂದ ಮೃತಪಟ್ಟಿರಬೇಕು . ರೈಲು ಡಿಕ್ಕಿಯಾಗಿ ಈತ ಪಕ್ಕದ ಪೊದೆಗೆ ಬಿದ್ದಿದ್ದ ಎಂದು ಸ್ಥಳೀಯರು ಬಂಟ್ವಾಳ ನಗರ ಠಾಣಾ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

- Advertisement -

Related news

error: Content is protected !!