Sunday, June 29, 2025
spot_imgspot_img
spot_imgspot_img

ಬಂಟ್ವಾಳ: ಲಾರಿಯಲ್ಲಿ ಸಿಎನ್‌ಜಿ ಸಿಲಿಂಡರ್ ಸಾಗಿಸುತ್ತಿದ್ದಾಗ ಗ್ಯಾಸ್ ಸೊರಿಕೆ

- Advertisement -
- Advertisement -

ಬಂಟ್ವಾಳ: ಬಿ.ಸಿ.ರೋಡು-ಪುಂಜಾಲಕಟ್ಟೆ ಹೆದ್ದಾರಿಯ ವಗ್ಗ ಬಳಿಯ ಹಂಚಿಕಟ್ಟೆಯಲ್ಲಿ ಗೇಲ್ ಕಂಪೆನಿಯ ಸಿಎನ್ ಜಿ ಗ್ಯಾಸ್ ಸಾಗಾಟದ ಲಾರಿಯಲ್ಲಿದ್ದ ಸಿಎನ್ ಜಿ ಸಿಲಿಂಡರ್ ನಿಂದ ಗ್ಯಾಸ್ ಸೊರಿಕೆಯಾದ ಘಟನೆ ಸಂಭವಿಸಿದೆ.

ಮಂಗಳೂರಿನಿಂದ ಬೆಳ್ತಂಗಡಿಗೆ ಸಾಗಿಸುವ ವೇಳೆ ಈ ಘಟನೆ ಸಂಭವಿಸಿದೆ ಎನ್ನಲಾಗಿದೆ. ಸಿಎನ್ ಜಿ ಸೋರಿಕೆ ಗಮನಕ್ಕೆ ಬಂದ ಕೂಡಲೇ ಚಾಲಕ ಹೆದ್ದಾರಿ ಬದಿಗೆ ಲಾರಿಯನ್ನು ನಿಲ್ಲಿಸಿದ್ದಾನೆ. ಬಳಿಕ ಬಂಟ್ವಾಳ ಅಗ್ನಿಶಾಮಕ ದಳದವರು ಸ್ಥಳಕ್ಕೆ ತೆರಳಿದ್ದಾರೆ. ಅದಾಗಲೇ ಗ್ಯಾಸ್ ಸೋರಿಕೆಯನ್ನು ಚಾಲಕ ಹಾಗೂ ಸ್ಥಳೀಯರು ಸೇರಿ ತಡೆದಿದ್ದಾರೆ ಎಂದು ತಿಳಿದುಬಂದಿದೆ.

- Advertisement -

Related news

error: Content is protected !!