Wednesday, October 7, 2026
spot_imgspot_img
spot_imgspot_img

ಬಂಟ್ವಾಳ: ವಿಳಾಸ ಕೇಳುವ ನೆಪದಲ್ಲಿ ಮಹಿಳೆಯ ಕರಿಮಣಿ ಸರ ಎಗರಿಸಿದ ಖದೀಮರು!

- Advertisement -
- Advertisement -

ಬಂಟ್ವಾಳ: ಬೈಕ್ ನಲ್ಲಿ ಬಂದ ಇಬ್ಬರು ನಡೆದುಕೊಂಡು ಹೋಗುತ್ತಿದ್ದ ಮಹಿಳೆಯನ್ನು ನಿಲ್ಲಿಸಿ ದಾರಿ ಕೇಳಿ ಬಳಿಕ ಮಹಿಳೆ ವಿಳಾಸ ಹೇಳುವ ಸಂದರ್ಭ ಕರಿಮಣಿ ಸರವನ್ನು ಸೆಳೆದು ಪರಾರಿಯಾದ ಘಟನೆ ಬಂಟ್ವಾಳ ತಾಲೂಕಿನ ಸಜಿಪಮೂಡ ಗ್ರಾಮದ ಮಾರ್ನಬೈಲು ಸಮೀಪ ನಡೆದಿದೆ.

ಮಹಿಳೆ ವತ್ಸಲಾ ನಾರಾಯಣ ಮಾರ್ನಬೈಲು ಬೊಳ್ಳಾಯಿಯ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವೇಳೆ ಅವರ ಬಳಿಗೆ ಬೈಕಿನಲ್ಲಿ ಬಂದ ಇಬ್ಬರು ಅಪರಿಚಿತರು ಈ ಕೃತ್ಯವೆಸಗಿದ್ದು, ಸುಮಾರು 12 ಗ್ರಾಂ ತೂಕದ ಕರಿಮಣಿ ಸರ ಕದ್ದೊಯ್ದಿದ್ದಾರೆ. ಈ ಘಟನೆ ಬಗ್ಗೆ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Related news

error: Content is protected !!