- Advertisement -
- Advertisement -
ಬೆಂಗಳೂರು: ಬಿಎಂಟಿಸಿ ಬಸ್ಸಿನಲ್ಲಿ ಅಗ್ನಿ ದುರಂತ ಸಂಭವಿಸಿದ್ದು ಮಲಗಿದ್ದ ಕಂಡಕ್ಟರ್ ಸಜೀವ ದಹನವಾಗಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ಮುತ್ತಯ್ಯಸ್ವಾಮಿ ಮೃತಪಟ್ಟ ದುರ್ವೈವಿ(45). ಬಸ್ಸಿನಲ್ಲಿ ಏಕಾಏಕಿ ಬೆಂಕಿ ದುರಂತ ಸಂಭವಿಸಿದ್ದು, ಬಸ್ನಲ್ಲಿ ನಿದ್ದೆಗೆ ಜಾರಿದ್ದ ಕಂಡಕ್ಟರ್ ಸುಟ್ಟು ಕರಕಲಾಗಿದ್ದಾರೆ.
ರಾತ್ರಿ ರೂಟ್ ಮುಗಿಸಿ ಲಿಂಗಧೀರನಹಳ್ಳಿ ಬಸ್ ನಿಲ್ದಾಣದಲ್ಲಿ ಬಸ್ಸು ನಿಂತಿದ್ದು, ಬಸ್ಸಿನಲ್ಲೇ ಚಾಲಕ ಹಾಗೂ ನಿರ್ವಾಹಕ ಮಲಗಿದ್ದರು. ಚಾಲಕ ಬೆಳಗ್ಗೆ ಎದ್ದು ಶೌಚಾಲಯಕ್ಕೆ ಹೋದಾಗ ಈ ದುರ್ಘಟನೆ ಸಂಭವಿಸಿದೆ. ಬಸ್ಸಿನಲ್ಲಿ ನಿದ್ದೆಗೆ ಜಾರಿದ್ದ ಕಂಡಕ್ಟರ್ ಸುಟ್ಟು ಕರಕಲಾಗಿದ್ದಾರೆ. ಇನ್ನು ವಿಷಯ ತಿಳಿದು ಘಟನಾ ಸ್ಥಳಕ್ಕೆ ಬ್ಯಾಡರಹಳ್ಳಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತ ನಿರ್ವಾಹಕ ಮುತ್ತಯ್ಯಸ್ವಾಮಿ ಮೂಲತಃ ಬಳ್ಳಾರಿ ಮೂಲದವರು ಎಂದು ತಿಳಿದುಬಂದಿದ್ದು, ಸದ್ಯ ಮೃತದೇಹವನ್ನು ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಲಾಗಿದೆ.
- Advertisement -