Saturday, August 29, 2026
spot_imgspot_img
spot_imgspot_img

ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ ಪ್ರಕರಣ; ಬಂಧಿತ ಆರೋಪಿಗೆ 20 ವರ್ಷಗಳ ಕಾಲ ಕಠಿಣ ಶಿಕ್ಷೆ ಹಾಗೂ ದಂಡ

- Advertisement -
- Advertisement -

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನ ಲಿಂಗರಾಜ್ ಅಲಿಯಾಸ್ ನವೀನ್ ಎಂಬಾತ ಪುಟ್ಟ ಬಾಲಕಿಗೆ ಚಾಕಲೇಟ್ ನೀಡುವುದಾಗಿ ಆಸೆ ತೋರಿಸಿ ಮನೆಗೆ ಕರೆದೊಯ್ದು ಲೈಂಗಿಕ ದೌರ್ಜನ್ಯ ಎಸಗಿದ ಘಟನೆ ಬೆಳಕಿಗೆ ಬಂದಿದೆ. ಆರೋಪಿಗೆ ನ್ಯಾಯಾಲಯವು ಕಠಿಣ ಶಿಕ್ಷೆ ಹಾಗೂ ದಂಡ ವಿಧಿಸಿದೆ.

18 ವರ್ಷದ ಈ ಯುವಕನು 2019 ರಲ್ಲಿ ಆರು ವರ್ಷದ ಪುಟ್ಟ ಬಾಲಕಿಯೋರ್ವಳನ್ನು ಚಾಕಲೇಟ್ ನೀಡುವುದಾಗಿ ಮನೆಗೆ ಕರೆದುಕೊಂಡು ಹೋಗಿ ಲೈಂಗಿಕವಾಗಿ ದೌರ್ಜನ್ಯವೆಸಗಿದ್ದ. ಈ ಘಟನಾ ಸಂಬಂಧ ಶಿವಮೊಗ್ಗದ ಭದ್ರಾವತಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪೋಕ್ಸ್ ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು.

ಇನ್ನೂ ಈ ಕುರಿತು ವಿಚಾರಣೆ ನಡೆಸಿದ ತ್ವರಿತ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಜೆ.ಎಸ್.ಮೋಹನ್ ಆರೋಪಿಯ ಮೇಲಿನ ಆರೋಪ ಸಾಬೀತಾದ ಹಿನ್ನೆಲೆ 20 ವರ್ಷಗಳ ಕಾಲ ಕಠಿಣ ಶಿಕ್ಷೆ ಹಾಗೂ 50,000 ರೂಪಾಯಿ ಮೊತ್ತದ ದಂಡವಿಧಿಸಿದ್ದಾರೆ. ಆರೋಪಿಗೆ ಒಂದು ವೇಳೆ ದಂಡ ಕಟ್ಟಲು ಆಗದೇ ಹೋದಲ್ಲಿ ಹೆಚ್ಚುವರಿಯಾಗಿ ಆರು ತಿಂಗಳುಗಳ ಕಾಲ ಸಾದಾ ಕಾರಾಗೃಹ ಶಿಕ್ಷೆಗೆ ಗುರಿ ಪಡಿಸಲಾಗುವುದು ಎಂದು ಆದೇಶಿಸಿದ್ದಾರೆ.

ಈ ಪ್ರಕರಣದಲ್ಲಿ ಸರ್ಕಾರದ ಪರವಾಗಿ ಸರ್ಕಾರಿ ಅಭಿಯೋಜಕರಾದ ಹರಿಪ್ರಸಾದ್ ವಾದ ಮಂಡನೆ ಮಾಡಿದರು.

ಈ ರೀತಿಯ ಪ್ರಕರಣಗಳಲ್ಲಿ ಭಾಗಿಯಾಗುವವರ ಮೇಲೆ ಸೂಕ್ತ ಹಾಗೂ ನಿರ್ದಾಕ್ಷಿಣ ಕಾನೂನು ಕ್ರಮಗಳನ್ನು ಕೈಗೊಂಡು ಮುಂದಿನ ದಿನಗಳಲ್ಲಿ ಈ ರೀತಿಯ ಘಟನೆಗಳು ಮರುಕಳಿಸದಂತೆ ನೋಡಿಕೊಳ್ಳಬೇಕೆಂದು ಸಾರ್ವಜನಿಕರು ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿದರು.

- Advertisement -

Related news

error: Content is protected !!