Monday, June 30, 2025
spot_imgspot_img
spot_imgspot_img

ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯದ ಆರೋಪ; ಪೋಕ್ಸೋ ಕಾಯ್ದೆಯಡಿ ಮುರುಘಾ ಮಠದ ಶ್ರೀಗಳು ಪೊಲೀಸ್‌ ವಶಕ್ಕೆ

- Advertisement -
- Advertisement -

ಹಾವೇರಿ: ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಆರೋಪದಲ್ಲಿ ಚಿತ್ರದುರ್ಗದ ಮುರುಘಾ ಶರಣರ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿತ್ತು. ಇದೀಗ ಈ ಪ್ರಕರಣದಲ್ಲಿ ಅವರನ್ನು ಪೊಲೀಸರು ಬಂಧಿಸಲಾಗಿದೆ.

ಹಾವೇರಿ ಜಿಲ್ಲೆಯ ಬಂಕಾಪುರದ ಬಳಿಯ ಹೆದ್ದಾರಿಯಲ್ಲಿ ಇಂದು ಪೋಕ್ಸೋ ಕೇಸ್ ಸಂಬಂಧ ಚಿತ್ರದುರ್ಗದ ಮುರುಘಾ ಮಠದ ಶ್ರೀಗಳನ್ನು ಚಿತ್ರದುರ್ಗ ಗ್ರಾಮಾಂತರ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಈ ಪೋಕ್ಸೋ ಪ್ರಕರಣದಲ್ಲಿ ಬಂಧನದ ಭೀತಿಯಲ್ಲಿದ್ದಂತ ಮುರುಘಾ ಶ್ರೀ ಅಜ್ಞಾತ ಸ್ಥಳಕ್ಕೆ ತೆರಳೋ ಹಿನ್ನಲೆಯಲ್ಲಿ ಮಹಾರಾಷ್ಟ್ರಕ್ಕೆ ತೆರಳುತ್ತಿದ್ದರು ಎನ್ನಲಾಗಿದೆ. ಖಚಿತ ಮಾಹಿತಿಯನ್ನು ಆಧರಿಸಿ, ಅವರನ್ನು ಬಂಧಿಸಲಾಗಿದೆ.

ಮೈಸೂರಿನ ಒಡನಾಡಿ ಸಂಸ್ಥೆಯ ಮೂಲಕ ಮುರುಘಾ ಶ್ರೀಗಳ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪದಲ್ಲಿ ಪೋಕ್ಸೋ ಕಾಯ್ದೆಯ ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಪ್ರಕರಣವನ್ನು ಮೈಸೂರಿನ ನಜರಾಬಾದ್ ಠಾಣೆಯಿಂದ ಚಿತ್ರದುರ್ಗದ ಗ್ರಾಮಾಂತರ ಠಾಣೆಗೆ ವರ್ಗಾವಣೆ ಮಾಡಲಾಗಿತ್ತು. ಈ ಬಳಿಕ ತನಿಖೆ ಆರಂಭಿಸಿದ್ದಂತ ಪೊಲೀಸರು ನಿನ್ನೆ ಬಾಲಕಿಯರನ್ನು ವಿಚಾರಣೆಗೆ ಒಳಪಡಿಸಿದ್ದರು. ಅಲ್ಲದೇ ವೈದ್ಯಕೀಯ ಪರೀಕ್ಷೆಗೂ ಹಾಜರುಪಡಿಸಿದ್ದರು. ಈ ಪ್ರಕರಣದಲ್ಲಿಯೇ ಇದೀಗ ಮುರುಘಾ ಮಠದ ಡಾ.ಶಿವಮೂರ್ತಿ ಶಿವಶರಣರನ್ನು ಪೊಲೀಸರು ಬಂಧಿಸಿದ್ದಾರೆ.

- Advertisement -

Related news

error: Content is protected !!