- Advertisement -
- Advertisement -
ಪುತ್ತೂರು: ದುಷ್ಕರ್ಮಿಗಳಿಂದ ಹತ್ಯೆಗೊಳಗಾದ ಬಿಜೆಪಿ ಯುವ ನಾಯಕ ಪ್ರವೀಣ್ ನೆಟ್ಟಾರು ರವರ ಮೃತದೇಹವನ್ನು ಪುತ್ತೂರು ಸರಕಾರಿ ಆಸ್ಪತ್ರೆಯ ಶವಗಾರದಿಂದಲೇ ಮೆರವಣಿಗೆ ಮೂಲಕ ದರ್ಬೆ ವೃತ್ತಕ್ಕೆ ಕೊಂಡು ಹೋಗಿ ಅಲ್ಲಿಂದ ಬೆಳ್ಳಾರೆ ಪ್ರವೀಣ್ ರವರ ಮನೆಗೆ ಕೊಂಡೊಯ್ಯಲಾಗುವುದು ಎಂದು ಮೂಲಗಳು ತಿಳಿಸಿವೆ.

ಮೃತ ದೇಹದ ಅಂತಿಮ ಯಾತ್ರೆಗೆ ಸಂಬಂಧಿಸಿದಂತೆ ಜು.27 ರಂದು ಪುತ್ತೂರಿನಲ್ಲಿ ಪೊಲೀಸರು ಬಿಗಿ ಬಂದೋಬಸ್ತ್ ಒದಗಿಸಿದ್ದಾರೆ.

ಮೆರವಣಿಗೆ ಸಂದರ್ಭದ ಸಾವಿರಾರು ಮಂದಿ ಭಾಗವಹಿಸುವ ನಿರೀಕ್ಷೆ ಇರುವುದರಿಂದ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ ಎಂದು ತಿಳಿದು ಬಂದಿದೆ.

ಪುತ್ತೂರು ಸರಕಾರಿ ಆಸ್ಪತ್ರೆ ಸುತ್ತ ಮತ್ತು ಶವಗಾರ ಕೊಠಡಿಗೆ ತೆರಳುವ ಕಡೆ ಪೊಲೀಸರು ಬಿಗಿ ಭದ್ರತೆ ವಹಿಸಿದ್ದಾರೆ.

- Advertisement -