Wednesday, September 23, 2026
spot_imgspot_img
spot_imgspot_img

ಬೆಳ್ತಂಗಡಿ ಅನಿಲ ಬೆಲೆ ಏರಿಕೆ ಖಂಡಿಸಿ ಹುಚ್ಚು ಸಾಹಸ ಪ್ರದರ್ಶಿಸಿದ ಯುವಕ

- Advertisement -
- Advertisement -

ಬೆಳ್ತಂಗಡಿ: ಪೆಟ್ರೋಲ್- ಡೀಸೆಲ್ ಬೆಲೆ ಏರಿಕೆ ದರವು ಹೆಚ್ಚಾದ ಜೊತೆಗೆ ಗ್ಯಾಸ್ ಸಿಲಿಂಡರ್ ದರವು ಹೆಚ್ಚಾದ ಹಿನ್ನೆಲೆಯಲ್ಲಿ ಅದನ್ನು ಖಂಡಿಸಿ ಯುವಕ ಗ್ಯಾಸ್ ಸಿಲಿಂಡರ್ ಗೆ ಬೆಂಕಿ ಹಚ್ಚಿ ವಿನೂತನವಾಗಿ ಪ್ರತಿಭಟನೆ ಮಾಡಿದ ಘಟನೆ ಬೆಳ್ತಂಗಡಿಯ ಬಂದಡ್ಕ ಎಂಬಲ್ಲಿ ನಡೆದಿದೆ.

ಬೆಳ್ತಂಗಡಿಯ ನಿವಾಸಿ ಸಿದ್ಧೀಕ್ ಅನಿಲ ಬೆಲೆ ಏರಿಕೆ ಖಂಡಿಸಿ ಗ್ಯಾಸ್ ಸಿಲಿಂಡರ್ ಸುತ್ತ ಬೆಂಕಿ ಹಚ್ಚಿ ಪ್ರತಿಭಟನೆ ಹೆಸರಿನಲ್ಲಿ ಹುಚ್ಚು ಸಾಹಸ ಪ್ರದರ್ಶಿಸಿದ್ದಾರೆ. ಸಿಲಿಂಡರ್‍ ಮೇಲೂ ಬೆಂಕಿ ಹಚ್ಚಿ ಕೇಂದ್ರ ಸರಕಾರದ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದಾರೆ. ಸಿಲಿಂಡರ್ ಗೆ ಬೆಂಕಿ ತಗಲುತ್ತಿದ್ದರೆ ಮಾತ್ರ ಭಾರೀ ಅನಾಹುತ ಸಂಭವಿಸುತ್ತಿತ್ತು.

vtv vitla
- Advertisement -

Related news

error: Content is protected !!