Saturday, June 28, 2025
spot_imgspot_img
spot_imgspot_img

ಬೆಳ್ತಂಗಡಿ: ಆದಿವಾಸಿ ಮಹಿಳೆಯನ್ನು ಅರೆ ಬೆತ್ತಲೆಗೊಳಿಸಿ ಹಲ್ಲೆ ಪ್ರಕರಣ : “ಧರ್ಮಾಧಿಕಾರಿಯವರು ದನಿ ಎತ್ತದೆ ಸುಮ್ಮನಿದ್ದಾರೆ”- ಬಿ.ಟಿ‌.ಲಲಿತಾನಾಯಕ್

- Advertisement -
- Advertisement -

ಬೆಳ್ತಂಗಡಿ : ಧರ್ಮಸ್ಥಳ ಸಮೀಪ ಆದಿವಾಸಿ ಮಹಿಳೆಯೊಬ್ಬರನ್ನು ಅರೆಬೆತ್ತಲೆಗೊಳಿಸಿ ಹಲ್ಲೆ ನಡೆಸಿದ ಅಮಾನವೀಯ ಘಟನೆಯನ್ನು ಜನತಾ ಪಕ್ಷದ ಅಧ್ಯಕ್ಷೆ ಬಿ.ಟಿ‌.ಲಲಿತಾನಾಯಕ್ ಖಂಡಿಸಿದ್ದಾರೆ.

ಇಂತಹ ಘಟನೆಗಳು ನಡೆದಾಗ ನೊಂದವರಿಗೆ ಸಾಂತ್ವನ ಹೇಳುವ ಮೂಲಕವಾದರೂ ಕನಿಷ್ಠ ಜನರ ಋಣ ತೀರಿಸಬೇಕು. ಇಂತಹ ಘಟನೆ ನಡೆಯದಂತೆ ಧರ್ಮಾಧಿಕಾರಿಗಳು ಬುದ್ಧಿ ಹೇಳಬೇಕು. ದೇವರು ಹಾಗೂ ಧರ್ಮ ಇರುವುದೇ ಮನುಷ್ಯರನ್ನು ನೋಡುವುದರಲ್ಲಿ ಎಂದರು. ದೇವರು ಹಾಗೂ ಧರ್ಮದ ಮೂಲಾರ್ಥವನ್ನೇ ಕುಲಗೆಡಿಸಲಾಗಿದೆ. ಧರ್ಮದ್ರೋಹ, ರಾಜದ್ರೋಹ, ಜನದ್ರೋಹದ ಕೆಲಸಗಳು ನಿರಂತರವಾಗಿ ನಡೆಯುತ್ತಿವೆ ಎಂದು ಬೇಸರ ವ್ಯಕ್ತಪಡಿಸಿದರು.

ಜನತಾ ಪಕ್ಷದ ಅಧ್ಯಕ್ಷೆ ಬಿ.ಟಿ‌.ಲಲಿತಾನಾಯಕ್

ಮೈಸೂರಿನಲ್ಲಿ ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಧರ್ಮಸ್ಥಳದ ಸಮೀಪ ಆದಿವಾಸಿ ಮಹಿಳೆಯೊಬ್ಬರನ್ನು ಅರೆಬೆತ್ತಲೆಗೊಳಿಸಿ ದೌರ್ಜನ್ಯ ಎಸಗಿದ್ದರೂ ಧರ್ಮಾಧಿಕಾರಿಯವರು ದನಿ ಎತ್ತದೆ ಸುಮ್ಮನಿದ್ದಾರೆ. ಧರ್ಮಸ್ಥಳ, ತಿರುಪತಿಗಳು ತಲೆ ಬೋಳಿಸಿ ಕಾಣಿಕೆ ಪಡೆಯುವುದಕ್ಕಾಗಿ ಮಾತ್ರವೇ ಇವೆಯೆ? ಎಂದು ಅವರು ಪ್ರಶ್ನಿಸಿದರು.

ಇದನ್ನೂ ಓದಿ:: ಬೆಳ್ತಂಗಡಿ : ಆದಿವಾಸಿ ಮಹಿಳೆಯನ್ನು ಅರೆಬೆತ್ತಲೆಗೊಳಿಸಿ ಹಲ್ಲೆ; ವಿಡಿಯೋ ಚಿತ್ರೀಕರಣ.! 9 ಜನರ ವಿರುದ್ಧ ಪ್ರಕರಣ ದಾಖಲು

- Advertisement -

Related news

error: Content is protected !!