Wednesday, July 22, 2026
spot_imgspot_img
spot_imgspot_img

ಬೆಳ್ತಂಗಡಿ: ಕಾಲೇಜು ಉಪನ್ಯಾಸಕಿ ಹೃದಯಾಘಾತದಿಂದ ನಿಧನ

- Advertisement -
- Advertisement -

ಬೆಳ್ತಂಗಡಿ: ಶ್ರೀ ಗುರುದೇವ ಪದವಿ ಕಾಲೇಜಿನ ಉಪನ್ಯಾಸಕಿ ಶ್ರೀಮತಿ ಮಲ್ಲಿಕಾ (40ವ) ಅವರು ಹೃದಯಾಘಾತದಿಂದ ಜು.14 ರಂದು ಮೃತಪಟ್ಟಿರುವ ಘಟನೆ ನಡೆದಿದೆ.

ಮಲ್ಲಿಕಾ ಅವರ ಆರೋಗ್ಯದಲ್ಲಿ ಇಂದು ಏರುಪೇರು ಕಂಡಿದ್ದು ತಕ್ಷಣ ಅವರನ್ನು ಬೆಳ್ತಂಗಡಿಯ ಸ್ಥಳೀಯ ಆಸ್ಪತ್ರೆಗೆ ಸಾಗಿಸಲಾಗಿದ್ದು, ಬಳಿಕ ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ಕೊಂಡೊಯ್ಯಲಾಯಿತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

ಇನ್ನು ಮಲ್ಲಿಕಾ ಅವರು ಪಿಲಿಚಂಡಿ ಕಲ್ಲು ನಿವಾಸಿಯಾಗಿದ್ದು, ಪ್ರಸ್ತುತ ಬೆಳ್ತಂಗಡಿಯ ಶ್ರೀ ಗುರುದೇವ ಪದವಿ ಕಾಲೇಜಿನಲ್ಲಿ ಉಪನ್ಯಾಸಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು.

ಮೃತರು ಪತಿ, ತಂದೆ, ತಾಯಿ ಹಾಗೂ ಬಂಧು ಬಳಗ ಅಪಾರ ವಿದ್ಯಾರ್ಥಿ ವೃಂದವನ್ನು ಅಗಲಿದ್ದಾರೆ.

- Advertisement -

Related news

error: Content is protected !!