Sunday, September 6, 2026
spot_imgspot_img
spot_imgspot_img

ಬೆಳ್ತಂಗಡಿ : ಕೆ.ಎಸ್.ಆರ್.ಟಿ.ಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ; ಸವಾರ ಮೃತ್ಯು, ಸಹಸವಾರ ಗಂಭೀರ

- Advertisement -
- Advertisement -

ಬೆಳ್ತಂಗಡಿ: ಲಾಯಿಲ ಕೊಯ್ಯುರು ಕ್ರಾಸ್ ತಿರುವು ರಸ್ತೆಯಲ್ಲಿ ಬೈಕ್ ಮತ್ತು ಕೆ.ಎಸ್.ಆರ್.ಟಿ.ಸಿ ಬಸ್ ನಡುವೆ ನಡೆದ ರಸ್ತೆ ಅಪಘಾತದಲ್ಲಿ ಗಂಭೀರ ಗಾಯಗೊಂಡಾತ ಮೃತಪಟ್ಟ ಘಟನೆ ನಡೆದಿದೆ.

ಉಜಿರೆಯ ಖಾಸಗಿ ಕಂಪೆನಿಯಲ್ಲಿ ಕೆಲಸ ಮುಗಿಸಿ ತನ್ನ ಪಲ್ಸರ್ ಬೈಕ್ ನಲ್ಲಿ ಬೆಳ್ತಂಗಡಿ ಕಡೆ ಬರುತ್ತಿದ್ದ ವಿಜಯ್ ಮತ್ತು ಶೈಲು ಎಂಬುವವರಿಗೆ ಬೆಳ್ತಂಗಡಿಯಿಂದ ಧರ್ಮಸ್ಥಳ ಕಡೆ ಸಂಚರಿಸುತ್ತಿದ್ದ ಬಸ್ ಡಿಕ್ಕಿ ಹೊಡೆದಿದೆ.

ಅಪಘಾತದ ತೀವ್ರತೆಗೆ ಬೈಕ್ನಲ್ಲಿದ್ದ ವಿಜಯ್ ಸಾವನ್ನಪ್ಪಿದ್ದು ಸಹಸವಾರ ಶೈಲು ಅವರಿಗೆ ಗಂಭೀರ ಗಾಯಗಳಾಗಿದೆ. ಸ್ಥಳಕ್ಕೆ ಪೋಲೀಸರು ಆಗಮಿಸಿ ತನಿಖೆ ನಡೆಸುತ್ತಿದ್ದಾರೆ.

- Advertisement -

Related news

error: Content is protected !!