Sunday, September 20, 2026
spot_imgspot_img
spot_imgspot_img

ಬೆಳ್ತಂಗಡಿ: ಚಾರ್ಮಾಡಿಯಲ್ಲಿ ಬೈಕ್ ಗಳ ನಡುವೆ ಡಿಕ್ಕಿ; ರಸ್ತೆಗೆಸೆಯಲ್ಪಟ್ಟ ಓರ್ವ ಬೈಕ್ ಸವಾರನ ಮೇಲೆ ಟ್ರಕ್ ಹರಿದು ಸಾವು

- Advertisement -
- Advertisement -

ಬೆಳ್ತಂಗಡಿ: ಚಾರ್ಮಾಡಿಯ ಪಂಡಿಕಟ್ಟೆಯಲ್ಲಿ ಬೈಕ್ ಗಳೆರಡು ಢಿಕ್ಕಿಯಾಗಿ ರಸ್ತೆಗೆ ಎಸೆಯಲ್ಪಟ್ಟ ಬೈಕ್‌ ಸವಾರನೋರ್ವನ ಮೇಲೆ ಹಿಂದಿನಿಂದ ಬರುತ್ತಿದ್ದ ಟ್ರಕ್ ಹರಿದು ಸ್ಥಳದಲ್ಲೇ ಮೃತಪಟ್ಟ ಘಟನೆ ಮಂಗಳವಾರ ರಾತ್ರಿ ನಡೆದಿದೆ.

ಚಾರ್ಮಾಡಿ ಗ್ರಾಮದ ಮೇಗಿನ ಮನೆ ನಿವಾಸಿ ಇ‌ಸ್ಮಾಯಿಲ್ ಎಂಬವರ ಪುತ್ರ ನಝೀರ್ (25) ಮೃತರು ಎಂದು ಗುರುತಿಸಲಾಗಿದೆ. ಅವರು ಕೆಲಸ‌ ಮುಗಿಸಿ ಮನೆಗೆ ಹೋಗುತ್ತಿದ್ದರು ಎಂದು ತಿಳಿದುಬಂದಿದೆ. ಇನ್ನೊಂದು ಬೈಕ್‌ ಸವಾರ ಗಂಭೀರ ಗಾಯಗೊಂಡಿದ್ದು, ಆತನನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಮೃತರು ತಂದೆ ತಾಯಿ ಓರ್ವ ಸಹೋದರನನ್ನು ಅಗಲಿದ್ದಾರೆ.

ಬೆಳ್ತಂಗಡಿ ಸಂಚಾರಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ‌ ನಡೆಸಿದ್ದಾರೆ.

- Advertisement -

Related news

error: Content is protected !!