Saturday, June 28, 2025
spot_imgspot_img
spot_imgspot_img

ಬೆಳ್ತಂಗಡಿ: ಬೈಕ್ ಹಾಗೂ ಸ್ಕಾರ್ಪಿಯೋ ನಡುವೆ ಭೀಕರ ಅಪಘಾತ; ಬೈಕ್ ಸವಾರ ಮೃತ್ಯು!!

- Advertisement -
- Advertisement -

ಬೆಳ್ತಂಗಡಿ : ಬೈಕ್ ಹಾಗೂ ಸ್ಕಾರ್ಪಿಯೋ ನಡುವೆ ಅಪಘಾತ ಬೈಕ್ ಸವಾರ ಸ್ದಳದಲ್ಲಿ ಮೃತ ಪಟ್ಟ ಘಟನೆ ನಡೆದಿದೆ. ರಾಷ್ಟ್ರೀಯ ಹೆದ್ದಾರಿ ಕಲ್ಮಂಜ ಗ್ರಾಮ ಪಂಚಾಯತ್ ವ್ಯಾಪ್ತಿಯ ನಿಡಿಗಲ್ ಎಂಬಲ್ಲಿ ಅಪಘಾತ ಸಂಭವಿಸಿದೆ.

ಮೃತ ಪಟ್ಟ ವ್ಯಕ್ತಿಯನ್ನು ಕಲ್ಮಂಜ ಗ್ರಾಮದ ಎಲ್ಲೆಂಗಿ ಮನೆ ನಿವಾಸಿ ಅಶೋಕ್ ಕುಮಾರ್(55) ಎನ್ನಲಾಗಿದೆ.

ಮುಂಡಾಜೆ ಹಾಲು ಉತ್ಪಾದಕರ ಸಹಕಾರ ಸಂಘದ ಕಾರ್ಯದರ್ಶಿಯಾಗಿ ಅಶೋಕ್ ಕುಮಾರ್ ಕಾರ್ಯನಿರ್ವಹಿಸುತ್ತಿದ್ದು, ಬೆಳಗ್ಗೆ ಹಾಲು ಉತ್ಪಾದಕ ಸಂಘಕ್ಕೆ ಹೋಗುವ ಸಂದರ್ಭದಲ್ಲಿ ಅಪಘಾತ ಸಂಭವಿಸಿದೆ. ಈ ಬಗ್ಗೆ ಬೆಳ್ತಂಗಡಿ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಗಂಭೀರ ಗಾಯಗೊಂಡ ಅಶೋಕ್ ಕುಮಾರ್ ಅವರನ್ನು ತಕ್ಷಣ ಖಾಸಗಿ ಆಸ್ಪತ್ರೆಗೆ ದಾಖಲಿಸಿದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃತ ಪಟ್ಟಿದ್ದಾರೆ.

- Advertisement -

Related news

error: Content is protected !!