Thursday, June 18, 2026
spot_imgspot_img
spot_imgspot_img

ಬೆಳ್ಳಾರೆ: ಪ್ರವೀಣ್‌ ನೆಟ್ಟಾರು ಕೊಲೆ ಪ್ರಕರಣದ ಆರೋಪಿ ಶಫೀಕ್‌ಗೆ ಮತ್ತೆ ನ್ಯಾಯಾಂಗ ಬಂಧನ

- Advertisement -
- Advertisement -

ಬೆಳ್ಳಾರೆ: ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದ ಆರೋಪಿ ಶಫೀಕ್‌ನನ್ನು ಪೊಲೀಶರು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ಆತನನ್ನು ಸುಳ್ಯ ನ್ಯಾಯಾಲಯಕ್ಕೆ ಹಾಜರುಪಡಿಸಿ ಬಳಿಕ ಪೊಲೀಸರು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.

ಪ್ರಕರಣದ ಬೆನ್ನು ಹತ್ತಿದ ಪೊಲೀಸರು ಆರಂಭದಲ್ಲಿ ಶಫೀಕ್‌ ಬೆಳ್ಳಾರೆ ಮತ್ತು ಝಾಕೀರ್‌ ಸವಣೂರು ಇಬ್ಬರನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು. ಬಳಿಕ ಹೆಚ್ಚಿನ ವಿಚಾರಣೆಗಾಗಿ ಪೊಲೀಸರು ಕಸ್ಟಡಿಗೆ ಪಡೆದಿದ್ದರು. ಐದು ದಿನಗಳ ನಂತರ ಮತ್ತೆ ಇಬ್ಬರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು. ಈ ವೇಳೆ ಝಾಕೀರ್‌‌ನನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ, ಶಫೀಕ್‌ನನ್ನು ಮತ್ತೆ ಪೊಲೀಸರು ಕಸ್ಟಡಿಗೆ ಪಡೆದಿದ್ದರು. ಇದೀಗ ನಿನ್ನೆ ಆತನನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.

vtv vitla
- Advertisement -

Related news

error: Content is protected !!