Saturday, June 28, 2025
spot_imgspot_img
spot_imgspot_img

ಬೈಂದೂರು: ಚಾಕೊಲೇಟ್ ನುಂಗಿ ಉಸಿರುಗಟ್ಟಿ 6 ವರ್ಷದ ಬಾಲಕಿ ಮೃತ್ಯು

- Advertisement -
- Advertisement -

ಬೈಂದೂರು: ಚಾಕೊಲೇಟ್ ನುಂಗಿ ಉಸಿರುಗಟ್ಟಿ 6 ವರ್ಷದ ಬಾಲಕಿಯೊಬ್ಬಳು ಮೃತಪಟ್ಟ ಘಟನೆ ಇಂದು ಬೈಂದೂರಿನಲ್ಲಿ ನಡೆದಿದೆ.

ಸಮನ್ವಿ (7)

ಶಾಲೆಗೆ ತೆರಳುತ್ತಿದ್ದ ಎರಡನೇ ತರಗತಿಬಾಲಕಿಯೊಬ್ಬಳು ಕುಸಿದು ಬಿದ್ದು ಸಾವನ್ನಪ್ಪಿದ ಘಟನೆ ಬುಧವಾರ ಜು.20ರಂದು ನಡೆದಿದೆ. ಮೃತಳನ್ನು ಸಮನ್ವಿ (6) ಎಂದು ಗುರುತಿಸಲಾಗಿದೆ. ಬಾಲಕಿ ಉಪ್ಪುಂದ ಸ್ಥಳೀಯ ಆಂಗ್ಲ ಮಾಧ್ಯಮ ಶಾಲೆಯೊಂದರಲ್ಲಿ ವಿದ್ಯಾರ್ಥಿನಿಯಾಗಿದ್ದು, ಇಂದು ಶಾಲೆಯ ಬಸ್ ಗೆ ಕಾಯುತ್ತಿದ್ದ ವೇಳೆ ಪ್ಲಾಸ್ಟಿಕ್ ಕವರ್ ಸಹಿತ ಚಾಕೊಲೇಟ್ ತಿಂದಾಗ ಗಂಟಲಲ್ಲಿ ಸಿಲುಕಿ ಈ ಘಟನೆ ಸಂಭವಿಸಿದೆ ಎನ್ನಲಾಗಿದೆ.

ಸದ್ಯ ಬಾಲಕಿಯ ಮೃತದೇಹವನ್ನು ಮಣಿಪಾಲದ ಖಾಸಗಿ ಆಸ್ಪತ್ರೆಗೆ ರವಾನೆ ಮಾಡಲಾಗಿದ್ದು, ಈ ಬಗ್ಗೆ ಬೈಂದೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Related news

error: Content is protected !!