Thursday, June 25, 2026
spot_imgspot_img
spot_imgspot_img

ಭದ್ರತಾ ಪಡೆಯಿಂದ ಎನ್‌‌ಕೌಂಟರ್; ಇಬ್ಬರು ಉಗ್ರರ ಹತ್ಯೆ

- Advertisement -
- Advertisement -

ಜಮ್ಮು-ಕಾಶ್ಮೀರ: ಅನಂತ್ ನಾಗ್ ಜಿಲ್ಲೆಯಲ್ಲಿ ಭದ್ರತಾ ಪಡೆಯ ಎನ್ ಕೌಂಟರ್‌‌ಗೆ ಇಬ್ಬರು ಉಗ್ರರು ಹತ್ಯೆಗೀಡಾಗಿರುವ ಘಟನೆ ಶನಿವಾರ ನಡೆದಿರುವುದಾಗಿ ತಿಳಿದು ಬಂದಿದೆ.

ಭಾರತೀಯ ಸೇನೆ, ಜಮ್ಮು-ಕಾಶ್ಮೀರ ಪೊಲೀಸರು ಮತ್ತು ಕೇಂದ್ರ ಮೀಸಲು ಪೊಲೀಸ್ ಪಡೆ ಜಂಟಿಯಾಗಿ ನಡೆಸಿದ ಕಾರ್ಯಾಚರಣೆಯಲ್ಲಿ ಇಬ್ಬರು ಉಗ್ರರು ಸಾವನ್ನಪ್ಪಿರುವುದಾಗಿ ವರದಿಯಾಗಿದೆ.

ಉಗ್ರರು ಅನಂತ್ ನಾಗ್ ಜಿಲ್ಲೆಯ ಕವರಿಗಾಮ್ ಪ್ರದೇಶದಲ್ಲಿ ಅಡಗಿದ್ದಾರೆಂಬ ಮಾಹಿತಿ ಮೇರೆಗೆ ಭದ್ರತಾ ಪಡೆಗಳು ಕಾರ್ಯಾಚರಣೆ ನಡೆಸಲು ಆರಂಭಿಸಿದಾಗ, ಗುಂಡಿನ ಚಕಮಕಿ ಆರಂಭವಾಗಿತ್ತು.

ಉಗ್ರರು ಅಡಗಿರುವ ಸ್ಥಳವನ್ನು ಸುತ್ತುವರೆದ ಸಂದರ್ಭದಲ್ಲಿ ಗುಂಡಿನ ದಾಳಿ ನಡೆಸಿದ್ದು, ಈ ಸಂದರ್ಭದಲ್ಲಿ ಭದ್ರತಾ ಪಡೆಯ ಪ್ರತಿ ದಾಳಿಗೆ ಇಬ್ಬರು ಉಗ್ರರು ಸಾವನ್ನಪ್ಪಿರುವುದಾಗಿ ತಿಳಿದುಬಂದಿದೆ.

- Advertisement -

Related news

error: Content is protected !!