Wednesday, June 24, 2026
spot_imgspot_img
spot_imgspot_img

ಭಾರತದಲ್ಲಿ ಹೆಚ್ಚುತ್ತಿರುವ ಕೊರೊನಾ ಪ್ರಕರಣ ಕುರಿತು ಇಂದು ಎಲ್ಲಾ ರಾಜ್ಯಗಳ ಸಿಎಂಗಳ ಜೊತೆ ಪ್ರಧಾನಿ ಮೋದಿ ಸಭೆ

- Advertisement -
- Advertisement -

ದೇಶದಲ್ಲಿ ದಿನದಿಂದ ದಿನಕ್ಕೆ ಸೋಂಕಿತರ ಸಂಖ್ಯೆ ಹೆಚ್ಚುತ್ತಿದೆ. ಭಾನುವಾರ ಭಾರತದಲ್ಲಿ ಒಟ್ಟು 2,593 ಮಂದಿಯಲ್ಲಿ ಹೊಸದಾಗಿ ಸೋಂಕು ವರದಿಯಾಗಿದ್ದು, 44 ಜನರು ಸಾವನ್ನಪ್ಪಿದ್ದಾರೆ. ಪ್ರಸ್ತುತ ದೇಶದಲ್ಲಿ 15,873 ಸಕ್ರಿಯ ಪ್ರಕರಣಗಳಿದ್ದು, ಈವರೆಗಿನ ಒಟ್ಟು ಸೋಂಕಿತರ ಸಂಖ್ಯೆ 4,30,57,545ಕ್ಕೆ ಮುಟ್ಟಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ. ಸದ್ಯ ದೇಶದಲ್ಲಿ ಕೊರೊನಾ ಪ್ರಮಾಣ ಏರಿಕೆ ಹಿನ್ನೆಲೆ ಇಂದು ದೇಶದ ಎಲ್ಲಾ ಸಿಎಂಗಳ ಜೊತೆ ಪ್ರಧಾನಿ ಸಭೆ ನಡೆಸಲು ಮುಂದಾಗಿದ್ದಾರೆ.

ಕೊರೊನಾ ಏರಿಕೆ ಹಿನ್ನೆಲೆ ಪ್ರಧಾನಿ ಮೋದಿ ದೇಶದ ಎಲ್ಲಾ ಸಿಎಂಗಳ ಜೊತೆ ವೀಡಿಯೊ ಕಾನ್ಸರೆನ್ಸ್ ಮೂಲಕ ಸಭೆ ನಡೆಸಲಿದ್ದಾರೆ. ಸಭೆಯಲ್ಲಿ ಆಯಾ ರಾಜ್ಯಗಳ ಕೊರೊನಾ ಸ್ಥಿತಿಗತಿಯ ಮಾಹಿತಿ ಪಡೆಯಲಿದ್ದಾರೆ. ಇದಕ್ಕೂ ಮೊದಲು ಜನವರಿ 13 ರಂದು, ಮೋದಿ ಅವರು ಒಮಿಕ್ರಾನ್ ರೂಪಾಂತರದಿಂದಾಗಿ ಕೊರೊನಾವೈರಸ್ ಪ್ರಕರಣಗಳ ಹೆಚ್ಚಳದ ಬಗ್ಗೆ ದೇಶದಲ್ಲಿನ COVID-19 ಪರಿಸ್ಥಿತಿಯ ಕುರಿತು ವೀಡಿಯೊ ಕಾನ್ಸರೆನ್ಸ್ ಮೂಲಕ ಮುಖ್ಯಮಂತ್ರಿಗಳೊಂದಿಗೆ ಸಂವಾದ ನಡೆಸಿದ್ದರು.

- Advertisement -

Related news

error: Content is protected !!