Sunday, September 20, 2026
spot_imgspot_img
spot_imgspot_img

ಮಂಗಳೂರು: ಅಕ್ರಮವಾಗಿ ಸಾಗಿಸುತ್ತಿದ್ದ 1.36 ಕೋಟಿ ರೂ. ಮೌಲ್ಯದ ಚಿನ್ನ ವಶಕ್ಕೆ

- Advertisement -
- Advertisement -

ಮಂಗಳೂರು: ಎರಡು ಪ್ರತ್ಯೇಕ ಪ್ರಕರಣದಲ್ಲಿ ದುಬೈನಿಂದ ಅಕ್ರಮವಾಗಿ ಸಾಗಿಸುತ್ತಿದ್ದ 24 ಕ್ಯಾರೆಟ್ ನ 1.36 ಕೋಟಿ ರೂ. ಮೌಲ್ಯದ ಚಿನ್ನವನ್ನು ಕಸ್ಟಮ್ಸ್ ಅಧಿಕಾರಿಗಳು ಮಂಗಳೂರು ವಿಮಾನ ನಿಲ್ದಾಣದಲ್ಲಿ ವಶ ಪಡಿಸಿಕೊಂಡಿದ್ದಾರೆ.

ದುಬೈಯಿಂದ ಮಂಗಳೂರು ವಿಮಾನ ನಿಲ್ದಾಣಕ್ಕೆ ಬಂದಿಳಿದ ಪ್ರಯಾಣಿಕನನ್ನು ತಪಾಸಣೆ ನಡೆಸಿದಾಗ 24 ಕ್ಯಾರೆಟ್‌ನ ಸುಮಾರು 964 ಗ್ರಾಂ ತೂಕದ ಚಿನ್ನವನ್ನು ವಶಪಡಿಸಿಕೊಂಡಿದ್ದಾರೆ. ಈತ ಗುದನಾಳದಲ್ಲಿ ಕ್ಯಾಪ್ಸೂಲ್‌ಗಳನ್ನಿಟ್ಟು ಸಾಗ್ಸುತ್ತಿದ್ದ. ಇದರ ಮೌಲ್ಯ 49,74,240 ರೂ‌. ಎಂದು ಅಂದಾಜಿಸಲಾಗಿದೆ.

ಮತ್ತೊಂದು ಪ್ರಕರಣದಲ್ಲಿ ದುಬೈನಿಂದ ಆಗಮಿಸಿದ ಮಹಿಳೆಯಿಂದ 86,89,440 ರೂ. ಮೌಲ್ಯದ 1.684 ಕೆ.ಜಿ ಚಿನ್ನವನ್ನು ವಶಪಡಿಸಿಕೊಳ್ಳಲಾಗಿದೆ. ಈಕೆ ಒಳವಸ್ತ್ರ ಮಾದರಿಯ ಬಟ್ಟೆಯಲ್ಲಿ ಹಾಗೂ ಸ್ಯಾನಿಟರಿ ಪ್ಯಾಡ್ ನಲ್ಲಿಟ್ಟು ಚಿನ್ನ ಸಾಗಿಸುತ್ತಿದ್ದಳು ಎಂದು ಕಸ್ಟಮ್ಸ್ ಅಧಿಕಾರಿಗಳು ತಿಳಿಸಿದ್ದಾರೆ.

- Advertisement -

Related news

error: Content is protected !!