Friday, September 4, 2026
spot_imgspot_img
spot_imgspot_img

ಮಂಗಳೂರು: ಅಡುಗೆ ಅನಿಲ ಸಿಲಿಂಡರ್‌ಗಳನ್ನು ಸಾಗಿಸುತ್ತಿದ್ದ ಟ್ರಕ್‌ನಲ್ಲಿ ಏಕಾಏಕಿ ಬೆಂಕಿ; ತಪ್ಪಿದ ಭಾರೀ ಅನಾಹುತ

- Advertisement -
- Advertisement -

ಮಂಗಳೂರು: ಮಂಗಳೂರಿನಿಂದ ಉಡುಪಿಗೆ ಎಚ್‌ಪಿ ಅಡುಗೆ ಅನಿಲ ಸಿಲಿಂಡರ್‌ಗಳನ್ನು ಸಾಗಿಸುತ್ತಿದ್ದ ಟ್ರಕ್‌ನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದ್ದು ಸಾರ್ವಜನಿಕರಲ್ಲಿ ಆತಂಕ ಮೂಡಿಸಿದೆ.

ಟ್ರಕ್ ಚಾಲಕ ಗುರುವಾರ ರಾತ್ರಿ ಹೆಜಮಾಡಿ ಟೋಲ್ ಪ್ಲಾಜಾ ಬಳಿ ವಾಹನ ನಿಲ್ಲಿಸಿ ಚಹಾ ಕುಡಿಯಲು ಸಮೀಪದ ಸ್ಟಾಲ್‌ಗೆ ಹೋಗಿದ್ದು, ಈ ವೇಳೆ ಚಾಲಕನ ಸೀಟಿನ ಕೆಳಗೆ ಬೆಂಕಿ ಕಾಣಿಸಿಕೊಂಡಿದೆ.

ತಕ್ಷಣ ಸಮೀಪದ ಸಣ್ಣಪುಟ್ಟ ಅಂಗಡಿಗಳ ಎಲ್ಲಾ ಸಿಬ್ಬಂದಿ, ಟೋಲ್ ಪ್ಲಾಜಾ ಸಿಬ್ಬಂದಿ ಮತ್ತು ಸ್ಥಳೀಯರು ಬಕೆಟ್‌ಗಳಲ್ಲಿ ನೀರು ಸುರಿದು ಬೆಂಕಿಯನ್ನು ನಂದಿಸಿದ್ದಾರೆ. ಇನ್ನು ಪಡುಬಿದ್ರಿ ಠಾಣಾಧಿಕಾರಿ ಪುರುಷೋತ್ತಮ್ ಹಾಗೂ ಸಿಬ್ಬಂದಿ ಕೂಡ ಸ್ಥಳಕ್ಕೆ ಧಾವಿಸಿದ್ದಾರೆ. ಉಡುಪಿಯ ಅಗ್ನಿಶಾಮಕ ದಳದ ತಂಡ ಸ್ಥಳಕ್ಕಾಗಮಿಸಿ ಬೆಂಕಿ ನಂದಿಸಲಾಯಿತು.

ಎಲೆಕ್ಟ್ರಿಷಿಯನ್ ಗಳನ್ನು ಕರೆಸಿ ತಪಾಸಣೆ ಮಾಡಿಸಿದಾಗ ವಾಹನದಲ್ಲಿನ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಆಗಿದೆ ಎಂದು ತಿಳಿದು ಬಂದಿದೆ.

- Advertisement -

Related news

error: Content is protected !!