Wednesday, July 22, 2026
spot_imgspot_img
spot_imgspot_img

ಮಂಗಳೂರು: ಇಂಟರ್ನ್ ಶಿಪ್ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ಪ್ರಕರಣ; ನ್ಯಾಯವಾದಿ ರಾಜೇಶ್ ಭಟ್ ಮನೆಯಲ್ಲಿ ಶೋಧ

- Advertisement -
- Advertisement -
vtv vitla
vtv vitla
vtv vitla

ಮಂಗಳೂರು: ಇಂಟರ್ನ್ ಶಿಪ್ ವಿದ್ಯಾರ್ಥಿನಿಯ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಸಂಬಂಧಿಸಿ ತಲೆಮರೆಸಿಕೊಂಡಿರುವ ಆರೋಪಿ ವಕೀಲ ಕೆ.ಎಸ್.ಎನ್ ರಾಜೇಶ್ ಭಟ್ ಅವರ ಮನೆಯಲ್ಲಿ ಪೊಲೀಸರು ನ.18ರ ಬುಧವಾರ ಶೋಧ ನಡೆಸಿದ್ದಾರೆ.

ನಿನ್ನೆ ಬಿಜೈಯಲ್ಲಿರುವ ರಾಜೇಶ್‌ ಭಟ್ ಮನೆಗೆ ಪೊಲೀಸರು ದಾಳಿ‌ ಮಾಡಿ ದಾಖಲೆಗಳಿಗಾಗಿ ಹುಡುಕಾಟ ನಡೆಸಿದ್ದಾರೆ ಎನ್ನಲಾಗಿದೆ. ಮಂಗಳೂರು ಸೆಂಟ್ರಲ್ ಎಸಿಪಿ ರಂಜಿತ್ ನೇತೃತ್ವದಲ್ಲಿ ತನಿಖೆ ಮುಂದುವರಿದಿದೆ.

ಮಂಗಳೂರಿನ ಖ್ಯಾತ ವಕೀಲರಾಗಿದ್ದ ರಾಜೇಶ್ ಭಟ್ ಅವರು ತಮ್ಮ ಕಚೇರಿಯಲ್ಲಿ ಇಂಟರ್ನ್‌ಶಿಪ್‌ಗೆ ಬಂದ ಕಾನೂನು ಕಾಲೇಜಿನ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ಪ್ರಕರಣ ದಾಖಲಾಗಿತ್ತು. ತನ್ನ ವಿರುದ್ದ ಪ್ರಕರಣ ದಾಖಲಾಗುತ್ತಿದ್ದಂತೆ ರಾಜೇಶ್ ಭಟ್ ತಲೆಮರೆಸಿಕೊಂಡಿದ್ದಾರೆ.

ಆರೋಪಿ ಭಟ್‌ಗಾಗಿ ಶೋಧ ನಡೆಸುತ್ತಿರುವ ಪೊಲೀಸರು ಆತ ವಿದೇಶಕ್ಕೆ ಹೋಗದಂತೆ ತಡೆಯಲು ಲುಕ್ ಔಟ್ ನೋಟಿಸ್ ಕೂಡ ಜಾರಿ ಮಾಡಿದ್ದಾರೆ. ಇದೀಗ ರಾಜೇಶ್ ಭಟ್ ಬಗ್ಗೆ ಹೆಚ್ಚಿನ ಮಾಹಿತಿ ಕಲೆ ಹಾಕಲು ಮನೆ ಶೋಧ ನಡೆಸಿದ್ದಾರೆ.

vtv vitla
- Advertisement -

Related news

error: Content is protected !!