Saturday, June 27, 2026
spot_imgspot_img
spot_imgspot_img

ಮಂಗಳೂರು: ಕಲ್ಲಡ್ಕ ಪ್ರಭಾಕರ್ ಭಟ್ ವಿರುದ್ಧ ಸಿಎಫ್‌ಐ ವಿದ್ಯಾರ್ಥಿ ಸಂಘಟನೆಯಿಂದ ಪ್ರತಿಭಟನೆ: ವಿಶ್ವ ವಿದ್ಯಾಲಯಕ್ಕೆ ಮುತ್ತಿಗೆ

- Advertisement -
- Advertisement -

ಮಂಗಳೂರು: ಆರ್.ಎಸ್.ಎಸ್. ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ವಿರುದ್ಧ ಸಿಎಫ್‌ಐ ವಿದ್ಯಾರ್ಥಿ ಸಂಘಟನೆ ಕಾರ್ಯಕರ್ತರು ಪ್ರತಿಭಟನೆ ತೀವ್ರಗೊಳಿಸಿದ್ದು, ಮಂಗಳೂರು ವಿಶ್ವ ವಿದ್ಯಾಲಯ ಮುತ್ತಿಗೆ ಹಾಕಲು ಯತ್ನಿಸಿದ್ದಾರೆ. ಕಲ್ಲಡ್ಕ ಪ್ರಭಾಕರ್ ಭಟ್ ಗೋ ಬ್ಯಾಕ್ ಎಂದು ಘೋಷಣೆ ಕೂಗಿ ವಿದ್ಯಾರ್ಥಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಬುರ್ಖಾ ಧರಿಸಿದ ಹಲವು ವಿದ್ಯಾರ್ಥಿನಿಯರು ಹಾಗೂ ವಿದ್ಯಾರ್ಥಿಗಳು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು. ಮಂಗಳೂರು ವಿವಿ ಮುತ್ತಿಗೆ ಹಾಕಲು ಮುಂದಾದ ಪ್ರತಿಭಟನಾಕಾರರನ್ನು ಪೊಲೀಸರು ತಡೆದಿದ್ದಾರೆ. ಈ ವೇಳೆ ವಿದ್ಯಾರ್ಥಿಗಳು ಪೊಲೀಸರನ್ನು ತಳ್ಳಿಕೊಂಡು ಹೋಗಿದ್ದು ಪೊಲೀಸ್ ಸಿಬ್ಬಂದಿಗಳು ವಿದ್ಯಾರ್ಥಿಗಳನ್ನು ಅಡ್ಡಗಟ್ಟಿದ್ದಾರೆ. ಈ ವೇಳೆ ಪ್ರತಿಭಟನಾಕಾರರು ರಸ್ತೆಯಲ್ಲಿಯೆ ಕುಳಿತು ಧರಣಿ ನಡೆಸಿದ್ದಾರೆ. ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದ್ದು, ಪೊಲೀಸರು ಇಬ್ಬರು ವಿದ್ಯಾರ್ಥಿಗಳನ್ನು ವಶಕ್ಕೆ ಪಡೆದಿದ್ದಾರೆ.

- Advertisement -

Related news

error: Content is protected !!