Monday, September 21, 2026
spot_imgspot_img
spot_imgspot_img

ಮಂಗಳೂರು: ಚಾಲಕನ ನಿಯಂತ್ರಣ ತಪ್ಪಿ ಬಸ್ ಪಲ್ಟಿ; 30ಕ್ಕೂ ಅಧಿಕ ಮಂದಿಗೆ ಗಾಯ

- Advertisement -
- Advertisement -

ಮಂಗಳೂರು: ನಗರ ಹೊರ ವಲಯದ ಗಂಜಿಮಠದ ಸಮೀಪದ ಸೂರಲ್ಪಡಿ ಬಳಿ ಖಾಸಗಿ ಬಸ್ ಪಲ್ಟಿಯಾಗಿ 30ಕ್ಕೂ ಅಧಿಕ ಪ್ರಯಾಣಿಕರು ಗಾಯಗೊಂಡ ಘಟನೆ ಏಪ್ರಿಲ್ 13ರ ಬುಧವಾರ ರಾತ್ರಿ ನಡೆದಿದೆ.

vtv vitla
vtv vitla

ಚಾಲಕನ ನಿಯಂತ್ರಣ ಕಳೆದುಕೊಂಡು ಬಸ್ ಪಲ್ಟಿಯಾಗಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ. ಘಟನೆಯಲ್ಲಿ ಗಾಯಗೊಂಡವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಖಾಸಗಿ ಬಸ್ ಮೂಡುಬಿದಿರೆಯಿಂದ ಮಂಗಳೂರಿಗೆ ಬರುತ್ತಿತ್ತು ಎಂದು ತಿಳಿದುಬಂದಿದೆ.

ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

- Advertisement -

Related news

error: Content is protected !!