Friday, September 4, 2026
spot_imgspot_img
spot_imgspot_img

ಮಂಗಳೂರು: ಚೂರಿ ಇರಿತ ಪ್ರಕರಣ; ಐವರು ಅರೆಸ್ಟ್..!

- Advertisement -
- Advertisement -
vtv vitla
vtv vitla

ಮಂಗಳೂರು: ಸುರತ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯ ಕೃಷ್ಣಾಪುರ ಆರನೇ ಬ್ಲಾಕ್‌ನಲ್ಲಿ ಫೆಬ್ರವರಿ 1 ರಂದು ನಡೆದ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಐವರನ್ನು ಪೊಲೀಸರು ಬಂಧಿಸಿದ್ದಾರೆ.

ಬಂಧಿತ ಆರೋಪಿಗಳನ್ನು ಮೊಹಮ್ಮದ್ ಶರೋಜ್ ಚಾರು (24), ಮೊಹಮ್ಮದ್ ಮುಸ್ತಫಾ (22), ಅಬ್ದುಲ್ ಅಮೀನ್ (19), ಹಲ್ಲೆ ನಡೆಸಲು ಕಾರು ಒದಗಿಸಿದ ಸಿದ್ದಿಕ್ ಸಮದ್ (25) ಮತ್ತು ಮೊಹಮ್ಮದ್ ನೌಫಿಲ್ (18) ಎಂದು ಗುರುತಿಸಲಾಗಿದೆ.

ಬಂಧಿತ ಆರೋಪಿಗಳು ಫೆ.1ರ ರಾತ್ರಿ ತನ್ನ ಸ್ನೇಹಿತರಾದ ಅಬೂಬಕ್ಕರ್ ಮತ್ತು ಹಾರಿಸ್ ಜತೆ ಮಾತನಾಡುತ್ತಿದ್ದ ಮಹಮ್ಮದ್ ಅನಸ್ ಎಂಬಾತನಿಗೆ ಚಾಕುವಿನಿಂದ ಇರಿದು ಗಂಭೀರವಾಗಿ ಗಾಯಗೊಳಿಸಿದ್ದರು.

ಅನಾಸ್ ನೀಡಿದ ದೂರಿನ ಮೇರೆಗೆ ಸುರತ್ಕಲ್ ಠಾಣೆಯಲ್ಲಿ ಐವರ ಮೇಲೆ ದೌರ್ಜನ್ಯ, ಜೀವ ಬೆದರಿಕೆ ಹಾಗೂ ಮಾರಕಾಯುಧಗಳಿಂದ ಹಲ್ಲೆ ನಡೆಸಿರುವುದಾಗಿ ಪ್ರಕರಣ ದಾಖಲಾಗಿದೆ.

- Advertisement -

Related news

error: Content is protected !!