- Advertisement -
- Advertisement -

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ದ್ವಿಚಕ್ರ ವಾಹನ ಸವಾರರಿಗೆ ಹೊಸ ನಿಯಮ ಪೊಲೀಸ್ ಇಲಾಖೆ ಜಾರಿಗೆ ತರಲಿದೆ. ಮಂಗಳೂರು ನಗರ ಸೇರಿದಂತೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಾಳೆಯಿಂದ ದ್ವಿಚಕ್ರ ವಾಹನದಲ್ಲಿ ಹಿಂಬದಿ ಸವಾರಿರಿಗೆ ಅವಕಾಶವಿಲ್ಲ ಎಡಿಜಿಪಿ ಅಲೋಕ್ ಕುಮಾರ್ ಮಂಗಳೂರಿನಲ್ಲಿ ತಿಳಿಸಿದ್ದಾರೆ.

ಹದಿನೆಂಟು ವರ್ಷದ ಕೆಳಗಿನ ಮಕ್ಕಳು, ಹಿರಿಯ ನಾಗರಿಕರು ಮತ್ತು ಮಹಿಳೆಯರಿಗೆ ಈ ನಿಯಮದಿಂದ ರಿಯಾಯಿತಿ ನೀಡಲಾಗಿದೆ. ಕೇವಲ ಪುರುಷ ಹಿಂಬದಿ ಸವಾರರಿಗೆ ಮಾತ್ರ ಈ ನಿಯಮ ಅನ್ವಯಿಸಲಿದೆ. ಮುಂದಿನ ಒಂದು ವಾರದ ಮಟ್ಟಿಗೆ ಜಿಲ್ಲೆಯಲ್ಲಿ ಈ ನಿಯಮವನ್ನು ಪಾಲನೆ ಮಾಡಲಾಗುತ್ತದೆ ಎಂದು ಅವರು ತಿಳಿಸಿದರು.

ಕೆಲವು ಬಾರಿ ಹಿಂಬದಿ ಸವಾರರು ಸಮಸ್ಯೆ ಉಂಟು ಮಾಡ್ತಾರೆ. ಬೇರೆ ರಾಜ್ಯದಲ್ಲೂ ಈ ನಿಯಮ ಜಾರಿಗೆ ತರಲಾಗಿತ್ತು. ಆಗ ಎಲ್ಲಾ ಪುರಷ ಹಿಂಬದಿ ಸವಾರರಿಗೆ ದ್ವಿಚಕ್ರ ವಾಹನದಲ್ಲಿ ಸಂಚರಿಸಲು ಅವಕಾಶ ನಿರಾಕರಿಸಲಾಗಿತ್ತು ಇಲ್ಲಿ ಮಹಿಳೆಯರು, ಹಿರಿಯ ನಾಗರಿಕರು,ಮಕ್ಕಳಿಗೆ ರಿಯಾಯಿತಿ ನೀಡಲಾಗಿದೆ ಎಂದು ಎಡಿಜಿಪಿ ಅಲೋಕ್ ಕುಮಾರ್ ತಿಳಿಸಿದ್ದಾರೆ.

- ಇನ್ಮುಂದೆ ಸೋಪು, ಶಾಂಪೂ, ಟೂತ್ಪೇಸ್ಟ್ಗೂ ವೆಜ್-ನಾನ್ವೆಜ್ ಗುರುತು ಕಡ್ಡಾಯ
- ಬಿಜೆಪಿ ನಾಯಕರನ್ನ ರಣಹದ್ದು ಎಂದ ಸಚಿವ ಯತೀಂದ್ರ ವಿರುದ್ಧ ದೂರು ದಾಖಲು
- ತೆಲಂಗಾಣ: ಆಸ್ಪತ್ರೆಯಲ್ಲಿ ಬೆಂಕಿ ಅವಘಡ – ಎರಡು ನವಜಾತ ಶಿಶುಗಳ ದುರ್ಮರಣ, 28 ಮಕ್ಕಳ ರಕ್ಷಣೆ
- ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ 28 ಕೋಟಿ ರೂ. ಮೌಲ್ಯದ ಗಾಂಜಾ, 1.75 ಕೋಟಿ ರೂ. ಮೌಲ್ಯದ ಚಿನ್ನ ಜಪ್ತಿ
- ಶ್ರೀ ದೇವತಾ ಸಮಿತಿ ವಿಟ್ಲ ಇದರ 55ನೇ ವರ್ಷದ ವಿಟ್ಲ ಶಾರದೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

- Advertisement -








