- Advertisement -
- Advertisement -
ಮಂಗಳೂರು: ವಾರ್ಷಿಕ ಪೊಲೀಸ್ ಕ್ರೀಡಾಕೂಟ-2022 ಉದ್ಘಾಟನಾ ಸಮಾರಂಭವು ನ.15 ರಂದು ಮಂಗಳವಾರ ಬೆಳಿಗ್ಗೆ 9ಗಂಟೆಗೆ ಜಿಲ್ಲಾ ಪೊಲೀಸ್ ಕವಾಯತು ಮೈದಾನ, ಡಿಎಆರ್ ಮಂಗಳೂರಿನಲ್ಲಿ ನಡೆಯಲಿದೆ.
ಈ ಕಾರ್ಯಕ್ರಮದ ಉದ್ಘಾಟನೆಯನ್ನು ದ.ಕ ಜಿಲ್ಲೆ ಜಿಲ್ಲಾಧಿಕಾರಿ ರವಿಕುಮಾರ್ ಎಂ.ಆರ್ ನೆರವೇರಿಸಲಿದ್ದಾರೆ. ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಕುಮಾರ್, ಮಂಗಳೂರು ಮಹಾನಗರ ಪಾಲಿಕೆ ಆಯುಕ್ತರಾದ ಅಕ್ಷಯ್ ಶ್ರೀಧರ್ ಗೌರವ ಆಹ್ವಾನಿತರಾಗಿ ಭಾಗವಹಿಸಲಿದ್ದಾರೆ. ವೇದಿಕೆಯಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಆಧೀಕ್ಷಕ ಸೋನವಣೆ ಋಷಿಕೇಶ್ ಭಗವಾನ್, ದಕ್ಷಿಣ ಕನ್ನಡ ಜಿಲ್ಲಾ ಹೆಚ್ಚುವರಿ ಪೊಲೀಸ್ ಅಧೀಕ್ಷಕ ಕುಮಾರ ಚಂದ್ರ ಉಪಸ್ಥಿತರಿರುವರು.
ಈ ಕ್ರೀಡಾಕೂಟದಲ್ಲಿ ಅಧಿಕಾರಿಗಳು ಮತ್ತು ಸಿಬ್ಬಂಧಿ ವರ್ಗದವರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕಾಗಿ ಆಯೋಜಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
- Advertisement -