Wednesday, June 17, 2026
spot_imgspot_img
spot_imgspot_img

ಮಂಗಳೂರು: ಮಸೂದ್ ಹತ್ಯೆ ಕೇಸ್ – ಆರೋಪಿಗಳ ನ್ಯಾಯಾಂಗ ಕಸ್ಟಡಿ ವಿಸ್ತರಣೆ

- Advertisement -
- Advertisement -

ಮಂಗಳೂರು: ಗುಂಪಿನಿಂದ ಹಲ್ಲೆಗೊಳಗಾಗಿ ಸಾವಿಗೀಡಾದ ಬೆಳ್ಳಾರೆ ಠಾಣೆ ವ್ಯಾಪ್ತಿಯ ಕಳಂಜದ ಮಸೂದ್‌ ಪ್ರಕರಣಕ್ಕೆ ಸಂಬಂಧಿಸಿ ಬಂಧಿತರಾಗಿದ್ದ ಎಲ್ಲಾ ಆರೋಪಿಗಳ ನ್ಯಾಯಾಂಗ ಕಸ್ಟಡಿಯನ್ನು ಆ. 29ರ ವರೆಗೆ ವಿಸ್ತರಿಸಿ ಸುಳ್ಯ ನಾಯಾಲಯ ಆದೇಶ ನೀಡಿದೆ.

ಆರೋಪಿಗಳಾದ ಅಭಿಲಾಷ್‌, ಸುನಿಲ್‌ ಕೆ., ಸುಧೀರ್‌, ಶಿವಪ್ರಸಾದ್‌, ರಂಜಿತ್‌ ಬಿ., ಸದಾಶಿವ ಪೂಜಾರಿ, ರಂಜಿತ್‌, ಭಾಸ್ಕರ ಕೆ.ಎಂ. ಅವರ ಮೇಲೆ ಪ್ರಕರಣ ದಾಖಲಾಗಿದ್ದು, ನ್ಯಾಯಾಂಗ ಕಸ್ಟಡಿಯಲ್ಲಿದ್ದರು. ಮಂಗಳವಾರ ಕಸ್ಟಡಿಯ ಅವಧಿ ಪೂರ್ಣಗೊಂಡ ಹಿನ್ನೆಲೆಯಲ್ಲಿ ಮತ್ತೆ ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು.

- Advertisement -

Related news

error: Content is protected !!