ಮಂಗಳೂರು: ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮ, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಹಾಗೂ ಜಿಲ್ಲಾಡಳಿತ ದಕ್ಷಿಣ ಕನ್ನಡ ಇವರ ಸಹಯೋಗದಲ್ಲಿ ಮಾರ್ಚ್ 3ರ ಗುರುವಾರ ಬೆಳಿಗ್ಗೆ 9 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ನಗರದ ಎಜೆ ಇಂಜಿನಿಯರಿಂಗ್ ಕಾಲೇಜ್ನಲ್ಲಿ ‘ಬೃಹತ್ ಉದ್ಯೋಗ ಮೇಳ’ವನ್ನು ಆಯೋಜಿಸಲಾಗಿದೆ.
ಉದ್ಯೋಗ ಮೇಳದಲ್ಲಿ ಹೆಸರಾಂತ ಕಂಪನಿಗಳಾದ ಟೀಮ್ ಲೀಸ್, ಸಿನೋಪ್ ಟೆಕ್, ಹೆಚ್.ಜಿ.ಎಸ್, ಬಿ.ಓ.ಎಸ್.ಸಿ.ಹೆಚ್, ಬೈಜೂಸ್, ಟಾಟಾ ಕಮ್ಯುನಿಕೇಷನ್ಸ್, ಟೊಯೊಟಾ ಕಿರ್ಲೋಸ್ಕರ್ ಮೋಟರ್, ಎನ್.ಟಿ.ಟಿ.ಎಫ್ ಸೇರಿದಂತೆ ಮುಂತಾದ 100ಕ್ಕೂ ಹೆಚ್ಚು ಕಂಪನಿಗಳು ಭಾಗವಹಿಸುತ್ತಿವೆ.
ಬಿಎ, ಬಿ.ಎಸ್ಸಿ, ಬಿಕಾಂ, ಐಟಿಐ, ಡಿಪ್ಲೋಮಾ, ಬಿಇ ಅರ್ಹತೆಯನ್ನು ಹೊಂದಿರುವ ವಿದ್ಯಾರ್ಥಿಗಳು ಈ ಉದ್ಯೋಗ ಮೇಳದಲ್ಲಿ ಭಾಗವಹಿಸಬಹುದು. ಆಸಕ್ತ ಅಭ್ಯರ್ಥಿಗಳು ಶೈಕ್ಷಣಿಕ ದಾಖಲೆಗಳ ಜೆರಾಕ್ಸ್ ಪ್ರತಿ, ಪಾಸ್ ಪೋರ್ಟ್ ಫೋಟೋ, ಆಧಾರ್ ಕಾರ್ಡ್ ಹಾಗೂ ಸ್ವವಿವರದ ಅರ್ಜಿಗಳೊಂದಿಗೆ ನೇರ ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು.
ಹೆಚ್ಚಿನ ಸಂಖ್ಯೆಯಲ್ಲಿ ಅಭ್ಯರ್ಥಿಗಳು ಕಾರ್ಯಕ್ರಮದ ಸದಾವಕಾಶ ಪಡೆದುಕೊಳ್ಳಿ. ಮೇಳದಲ್ಲಿ ಭಾಗವಹಿಸಲು ಇಚ್ಚಿಸುವವರು www.skillconnet.kaushalkar.com ಇಲ್ಲಿ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಬಹುದು.