Saturday, June 20, 2026
spot_imgspot_img
spot_imgspot_img

ಮಂಗಳೂರು: ಯುವತಿ ನಾಪತ್ತೆ

- Advertisement -
- Advertisement -

ಮಂಗಳೂರು: ನಗರದಲ್ಲಿ ನೆಲೆಸಿದ್ದ ದೆಹಲಿ ಮೂಲದ ನಿವಾಸಿ ನಾಪತ್ತೆಯಾದ ಘಟನೆ ನಡೆದಿದ್ದು ಪೊಲೀಸ್ ಠಾಣೆಯಲ್ಲಿ ನಾಪತ್ತೆ ದೂರು ದಾಖಲಾಗಿದೆ. 5 ವರ್ಷಗಳಿಂದ ಅಶೋಕ ನಗರ ಗೋಕುಲ ಕಲ್ಯಾಣ ಮಂಟಪ ಬಳಿಯ ಬಂಧುಗಳ ಮನೆಯಲ್ಲಿ ನೆಲೆಸಿದ್ದ ದೀಕ್ಷಿತಾ ಅಲಿಯಾಸ್‌ ರಿಯಾ (20) ನಾಪತ್ತೆಯಾಗಿದ್ದಾರೆ.

ಸಾಮಾಜಿಕ ಜಾಲತಾಣದಲ್ಲಿ ಹೆಚ್ಚಾಗಿ ಸಮಯ ಕಳೆಯುತ್ತಿದ್ದ ಹಿನ್ನೆಲೆಯಲ್ಲಿ ಮನೆಯವರು ಬುದ್ಧಿಮಾತು ಹೇಳಿದ್ದರು. ಏ. 4ರಂದು ಸಂಜೆ 5 ಗಂಟೆಗೆ ಮನೆಯಿಂದ ತೆರಳಿದವರು ಮರಳಿಲ್ಲ. ಎತ್ತರ 5.1 ಅಡಿ ಎತ್ತರ, ದುಂಡು ಮುಖ ಗೋಧಿ ಮೈಬಣ್ಣ. ಮನೆಯಿಂದ ಹೋಗುವಾಗ ಹಳದಿ ನೀಲಿ ಮಿಶ್ರಿತ ಚೂಡಿದಾರ ಧರಿಸಿದ್ದು, ಹಿಂದಿ ಭಾಷೆ ಬಲ್ಲವರಾಗಿದ್ದಾರೆ. ಯುವತಿ ಕಂಡುಬಂದಲ್ಲಿ ಉರ್ವ ಪೊಲೀಸ್‌ ಠಾಣೆ ಅಥವಾ ಕಂಟ್ರೋಲ್‌ ರೂಮ್‌ ಗೆ ಮಾಹಿತಿ ನೀಡುವಂತೆ ಪೊಲೀಸರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

- Advertisement -

Related news

error: Content is protected !!