Sunday, June 21, 2026
spot_imgspot_img
spot_imgspot_img

ಮಂಗಳೂರು: ರಸ್ತೆ ದಾಟಲು ನಿಂತಿದ್ದ ಪಾದಚಾರಿಗೆ ಖಾಸಗಿ ಬಸ್ ಡಿಕ್ಕಿ; ವ್ಯಕ್ತಿ ದುರ್ಮರಣ, ಛಿದ್ರ – ಛಿದ್ರಗೊಂಡ ದೇಹ..!

- Advertisement -
- Advertisement -
vtv vitla
vtv vitla

ಮಂಗಳೂರು: ಪಾದಚಾರಿಯೋರ್ವರಿಗೆ ಖಾಸಗಿ‌ ಬಸ್ ಢಿಕ್ಕಿ ಹೊಡೆದು ಸ್ಥಳದಲ್ಲೇ ಮೃತಪಟ್ಟ ದಾರುಣ ಘಟನೆ ಮೂಳೂರಿನಲ್ಲಿ ನಡೆದಿದೆ.

ಮೃತ ವ್ಯಕ್ತಿ ಮೂಳೂರು ಬೀಚ್ ಬಳಿಯ ನಿವಾಸಿ ಹರಿಓಂ ಯಾನೆ ರಮೇಶ್ (65) ಎನ್ನಲಾಗಿದೆ.

ರಾಷ್ಟ್ರೀಯ ಹೆದ್ದಾರಿ 66 ರ ಮೂಳೂರು ಬಸ್ ನಿಲ್ದಾಣ ದ ಬಳಿ ರಸ್ತೆ ದಾಟುತ್ತಿದ್ದ ಅವರಿಗೆ ಮಂಗಳೂರಿನಿಂದ ಉಡುಪಿ‌ ಕಡೆಗೆ ತೆರಳುತ್ತಿದ್ದ ಎಕ್ಸ್‌ಪ್ರೆಸ್ ಬಸ್ ಡಿಕ್ಕಿ ಹೊಡೆದ ರಭಸಕ್ಕೆ ರಮೇಶ್‌ರವರ ತಲೆ ಜಜ್ಜಿ ಹೋಗಿದ್ದು, ಸ್ಥಳದಲ್ಲೇ ಅವರು ಮೃತಪಟ್ಟಿದ್ದಾರೆ.

ಅಪಘಾತದ ತೀವ್ರತೆಗೆ ರಮೇಶ್ ಬಂಗೇರ ಅವರ ದೇಹ ಛಿದ್ರ ಛಿದ್ರವಾಗಿ ಹೋಗಿದ್ದು, ದೇಹದ ಭಾಗಗಳು ರಸ್ತೆಯಲ್ಲಿ ಚೆಲ್ಲಲ್ಪಟ್ಟಿವೆ. ಈ ಘಟನೆ ಬಗ್ಗೆ ಕಾಪು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

vtv vitla
vtv vitla
- Advertisement -

Related news

error: Content is protected !!