Friday, July 24, 2026
spot_imgspot_img
spot_imgspot_img

ಮಂಗಳೂರು: ವಿವಿ ಕಾಲೇಜಿನಲ್ಲಿ ಹೊಡೆದಾಟ ಪ್ರಕರಣ; ಆರು ವಿದ್ಯಾರ್ಥಿಗಳ ವಿರುದ್ಧ FIR ದಾಖಲು

- Advertisement -
- Advertisement -
vtv vitla

ಮಂಗಳೂರು: ನಗರದ ಹಂಪನಕಟ್ಟೆ ವಿವಿ ಕಾಲೇಜಿನಲ್ಲಿ ವಿದ್ಯಾರ್ಥಿಗಳ ಹೊಡೆದಾಟ ಪ್ರಕರಣದಲ್ಲಿ ಒಟ್ಟು 6 ಮಂದಿ ವಿರುದ್ಧ ನಗರದ ಪಾಂಡೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮರ್ಝುಕ್, ಅಬೂಬಕ್ಕರ್ ಸಿದ್ದೀಕ್, ಮಹಮ್ಮದ್ ಅಪಾಝ್, ಪ್ರಜನ್ ಶೆಟ್ಟಿ, ಸ್ವಸ್ತಿಕ್ ಹಾಗೂ ಗುರುಕಿರಣ್ ಮೇಲೆ ಎಫ್ಐಆರ್ ದಾಖಲಾಗಿದೆ.

ತರಗತಿಯಲ್ಲಿ ಸಾವರ್ಕರ್ ಫೋಟೊ ಅಳವಡಿಸಿದ ವಿಷಯಕ್ಕೆ ಸಂಬಂಧಿಸಿದಂತೆ ನಿನ್ನೆ ಮಧ್ಯಾಹ್ನ ಊಟದ ವೇಳೆ ಎರಡು ವಿದ್ಯಾರ್ಥಿ ತಂಡದ ಮಧ್ಯೆ ಮಾತಿಗೆ ಮಾತು ಬೆಳೆದು ಹೊಡೆದಾಟ ನಡೆದಿದೆ. ಇದರಲ್ಲಿ ಕೆಲ ವಿದ್ಯಾರ್ಥಿಗಳು ಆಸ್ಪತ್ರೆ ಗೆ ದಾಖಲಾಗಿ ಚಿಕಿತ್ಸೆ ಪಡೆದುಕೊಂಡಿದ್ದಾರೆ. ಇದೇ ಘಟನೆಗೆ ಸಂಬಂಧಿಸಿದಂತೆ ಸಂಜೆ ಸಮಾನ ಮನಸ್ಕ ಸಂಘಟನೆಯ ವಿದ್ಯಾರ್ಥಿಗಳು ಕಾಲೇಜಿಗೆ ಮುತ್ತಿಗೆ ಹಾಕಲು ಯತ್ನಿಸಿ ಗೇಟು ಬಳಿ ಪ್ರತಿಭಟನೆ ನಡೆಸಿದ್ದರು.

vtv vitla
- Advertisement -

Related news

error: Content is protected !!