Sunday, June 14, 2026
spot_imgspot_img
spot_imgspot_img

ಮಂಗಳೂರು: ಶಾಂತಿ ಸಭೆಗೆ ಬಹಿಷ್ಕಾರ ಹಾಕಿದ ಮುಸ್ಲಿಂ ಸಮುದಾಯ

- Advertisement -
- Advertisement -

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಇಂದು ಸಭೆ ಕರೆದಿದ್ದು, ಈ ಶಾಂತಿ ಸಭೆಗೆ ಮುಸ್ಲಿಂ ಸಮುದಾಯದ ಮುಖಂಡರು ಬಹಿಷ್ಕಾರ ಹಾಕಿದ್ದಾರೆ.

ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಇಂದು 11 ಗಂಟೆಗೆ ಎಲ್ಲಾ ಸಮುದಾಯದ ಮುಖಂಡರಿಗೆ ಮತ್ತು ಸಂಘ ಸಂಸ್ಥೆಗಳ ನಾಯಕರ ಜೊತೆ ಶಾಂತಿ ಸಭೆಗೆ ಆಹ್ವಾನ ನೀಡಲಾಗಿತ್ತು. ಆದರೆ ಮುಖ್ಯಮಂತ್ರಿ ತಾರತಮ್ಯ ನೀತಿಯನ್ನು ಖಂಡಿಸಿ ಇಂದಿನ ಸಭೆಗೆ ಮುಸ್ಲಿಂ ಸಮುದಾಯ ಬಹಿಷ್ಕಾರ ಹಾಕಿದೆ.

ಮುಸ್ಲಿಂ ಸೆಂಟ್ರಲ್ ಕಮಿಟಿ, SKSSF, PFI, ಜಮಾತೆ ಇಸ್ಲಾಮ್ ಸೇರಿ ಹಲವು ಮುಸ್ಲಿಂ ಸಂಘಟನೆಗಳು ಬಹಿಷ್ಕಾರ ಹಾಕಿವೆ. ಈ ಸಭೆಯಲ್ಲಿ ಎಡಿಜಿಪಿ ಅಲೋಕ್ ಕುಮಾರ್, ದಕ್ಷಿಣ ಕನ್ನಡ ಜಿಲ್ಲಾಧಿಕಾರಿ, ಉಸ್ತುವಾರಿ ಸಚಿವ, ಮಂಗಳೂರು ನಗರ ಪೊಲೀಸ್ ಕಮೀಷನರ್, ಜಿಲ್ಲಾ ಎಸ್ಪಿ ಜಿ.ಪ.ಸಿಇಒ ಸೇರಿ ಹಿರಿಯ ಅಧಿಕಾರಿಗಳು ಭಾಗವಹಿಸಲಿದ್ದಾರೆ. ಈ ಸಭೆಗೆ ಮಾಧ್ಯಮಗಳಿಗೆ ನಿರ್ಬಂಧ ಹೇರಿದ್ದಾರೆ.

- Advertisement -

Related news

error: Content is protected !!