Sunday, June 21, 2026
spot_imgspot_img
spot_imgspot_img

ಮಂಗಳೂರು: ಸಮುದ್ರಕ್ಕೆ ಹಾರಿ ಇಂಜಿನಿಯರಿಂಗ್ ವಿದ್ಯಾರ್ಥಿ ಆತ್ಮಹತ್ಯೆ

- Advertisement -
- Advertisement -

ಮಂಗಳೂರು: ಸಮುದ್ರಕ್ಕೆ ಹಾರಿ ಇಂಜಿನಿಯರಿಂಗ್ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸೋಮೇಶ್ವರ ಬೀಚ್ ನಲ್ಲಿ ನಡೆದಿದೆ.

ಸೋಮೆಶ್ವರ ಮೂಲದ ಪವನ್ ಭಟ್ ಮೃತ ದುರ್ದೈವಿ. ಸೋಮೇಶ್ವರ ಬೀಚ್ ತೀರದಲ್ಲಿ ಪವನ್ ಮೃತದೇಹ ಪತ್ತೆಯಾಗಿದೆ. ಪವನ್ ಆತ್ಮಹತ್ಯೆಗೆ ಇನ್ನೂ‌ ಸರಿಯಾದ ಕಾರಣ ತಿಳಿದು ಬಂದಿಲ್ಲ.

ಪವನ್ ಭಟ್ ಖಾಸಗಿ ಕಂಪನಿಯೊಂದರಲ್ಲಿ ಪಾರ್ಟ್ ಟೈಮ್ ಕೆಲಸ ನಿರ್ವಹಿಸುತ್ತಿದ್ದ. ಇನ್ನು ಮೀನುಗಾರರು ಹಾಗೂ ಸ್ಥಳೀಯ ನಾಗರಿಕರು ಎರಡು-ಮೂರು ಗಂಟೆ ಶೋಧ ಕಾರ್ಯ ನಡೆಸಿದ ಬಳಿಕ ಪವನ್ ಮೃತದೇಹ ಪತ್ತೆಯಾಗಿದೆ. ಈ ಬಗ್ಗೆ ಉಳ್ಳಾಲ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Related news

error: Content is protected !!