Thursday, September 3, 2026
spot_imgspot_img
spot_imgspot_img

ಮಂಗಳೂರು: ಸುರತ್ಕಲ್‌ ನಲ್ಲಿ ಶಾಸಕ ಡಾ.ಭರತ್ ಶೆಟ್ಟಿ ವೈ ಅವರ ಅಧಿಕೃತ ಕಚೇರಿ ಶುಭಾರಂಭ

- Advertisement -
- Advertisement -

ಬಿಜೆಪಿ ರಾಜ್ಯಾಧ್ಯಕ್ಷರೂ, ಸಂಸದರೂ ಆಗಿರುವ ಮಾನ್ಯ ನಳಿನ್ ಕುಮಾರ್ ಕಟೀಲ್ ಅವರ ಉಪಸ್ಥಿತಿಯಲ್ಲಿ ಬಿಜೆಪಿಯ ಹಿರಿಯ ಮುಖಂಡ ಕಾಳಪ್ಪ ಕುಕ್ಯಾನ್ ಉದ್ಘಾಟಿಸಿದರು. ಈ ಸಂದರ್ಭ ನಳಿನ್ ಕುಮಾರ್ ಕಟೀಲ್ ಅವರು ಮಾತನಾಡಿ ಡಾ.ಭರತ್ ಶೆಟ್ಟಿ ಅವರು ಕಳೆದ ನಾಲ್ಕು ವರ್ಷಗಳಲ್ಲಿ ಕೋಟ್ಯಂತರ ರೂಪಾಯಿ ಅನುದಾನವನ್ನು ತರುವ ಮೂಲಕ ಕ್ಷೇತ್ರದ ಅಭಿವೃದ್ಧಿಗೆ ಒತ್ತು ನೀಡಿದ್ದಾರೆ.

ಜನರ ನಿರಂತರ ಸಂಪರ್ಕಕ್ಕಾಗಿ ಮಂಗಳೂರಿನಲ್ಲಿ ಕಚೇರಿ ಹೊಂದಿದ್ದರು. ಇದೀಗ ಸುರತ್ಕಲ್, ಕಾವೂರು ಸುತ್ತಮುತ್ತಲಿನ ಜನರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಸುರತ್ಕಲ್ ನಲ್ಲಿಯೂ ಸುಸಜ್ಜಿತ ಕಚೇರಿ ಆರಂಭಿಸಿದ್ದಾರೆ.

ಜನರ ಸಮಸ್ಯೆಗಳನ್ನು ಬಗೆಹರಿಸುವಲ್ಲಿ ಶಾಸಕರು ಹೆಚ್ಚು ಹೊತ್ತು ನೀಡಿದ್ದು ಮುಂದೆಯೂ ಇವರ ಕ್ಷೇತ್ರದಲ್ಲಿ ಅಭಿವೃದ್ಧಿ ಕೆಲಸಗಳು ಮುಂದುವರೆಯಲಿ ಎಂದು ಆಶಿಸಿದರು. ಶಾಸಕ ಡಾ. ಭರತ್ ಶೆಟ್ಟಿ ಅವರು ಈ ಸಂದರ್ಭ ಮಾನ್ಯ ನಳಿನ್ ಕುಮಾರ್ ಕಟೀಲ್, ವಿಧಾನ ಪರಿಷತ್ತಿನ ಮಾಜಿ ಸದಸ್ಯರಾದ ಬಾಲಕೃಷ್ಣ ಭಟ್, ಕಾಳಪ್ಪ ಗೌಡ ಅವರನ್ನು ಸನ್ಮಾನಿಸಿದರು.

ಕಾರ್ಯಕ್ರಮದಲ್ಲಿ ಮಂಗಳೂರು ಉತ್ತರ ಮಂಡಲದ ಅಧ್ಯಕ್ಷ ತಿಲಕ್ ರಾಜ್‌ ಕೃಷ್ಣಾಪುರ, ಉದ್ಯಮಿ ಸುಭಾಶ್ಚಂದ್ರ ಶೆಟ್ಟಿ, ಬಿಜೆಪಿ ಪಕ್ಷದ ಮಂಗಳೂರು ಮಹಾನಗರ ಪಾಲಿಕೆಯ ಸದಸ್ಯರು, ಬಿಜೆಪಿ ಶಕ್ತಿ ಕೇಂದ್ರದ ಅಧ್ಯಕ್ಷರು ಪದಾಧಿಕಾರಿಗಳು, ಬಿಜೆಪಿ ಪಕ್ಷದ ಕಾರ್ಯಕರ್ತರು ಈ ಸಂದರ್ಭ ಉಪಸ್ಥಿತರಿದ್ದರು.

- Advertisement -

Related news

error: Content is protected !!