Monday, June 22, 2026
spot_imgspot_img
spot_imgspot_img

ಮಂಗಳೂರು: ಸ್ಥಳ ಮಹಜರಿಗೆ ತೆರಳಿದ ವೇಳೆ ಸಿಬ್ಬಂದಿಗೆ ಹಲ್ಲೆ ನಡೆಸಿ ಪರಾರಿಯಾಗಲು ಯತ್ನ; ಆರೋಪಿ ಕಾಲಿಗೆ ಪೊಲೀಸರಿಂದ ಫೈರಿಂಗ್

- Advertisement -
- Advertisement -

ಮಂಗಳೂರು: ಸ್ಥಳ ಮಹಜರಿಗೆ ತೆರಳಿದಾಗ ಸಿಬ್ಬಂದಿಗೆ ಹಲ್ಲೆ ನಡೆಸಿ ಪರಾರಿಯಾಗಲು ಯತ್ನಿಸಿದ ಆರೋಪಿ ಕಾಲಿಗೆ ಪೊಲೀಸ್ ಅಧಿಕಾರಿ ಗುಂಡು ಹಾರಿಸಿದ ಘಟನೆ ಸೋಮವಾರ ನಡೆದಿದೆ.

ಗ್ರಾಮಾಂತರ ಠಾಣೆ ವ್ಯಾಪ್ತಿಯ ಕಂಬಳ ಗ್ರಾಮದ ಬಳಿ ಸ್ಥಳ ಮಹಜರು ವೇಳೆ ಎಂ.ಡಿ. ಮುಫ್ಲಾಕ್ (26) ಎಂಬ ಕೊಲೆ ಯತ್ನ ಪ್ರಕರಣದ ಆರೋಪಿ ಸಿಬಂದಿಯೊಬ್ಬರ ಮೇಲೆ ಹಲ್ಲೆ ನಡೆಸಿ ಪರಾರಿಯಾಗಲು ಯತ್ನಿಸಿದ್ದಾನೆ.

ವಾಹನ ಮತ್ತು ಆಯುಧಗಳನ್ನು ವಶಪಡಿಸಿಕೊಳ್ಳಲು ಕರೆದುಕೊಂಡು ಹೋಗುತ್ತಿದ್ದಾಗ ಘಟನೆ ನಡೆದಿದೆ. ಆ. 19 ರಂದು ನಡೆದ ಕೊಲೆ ಯತ್ನ ಪ್ರಕರಣದಲ್ಲಿ ಈತ ಆರೋಪಿಯಾಗಿದ್ದ.

- Advertisement -

Related news

error: Content is protected !!