Friday, June 27, 2025
spot_imgspot_img
spot_imgspot_img

ಮಗನ ಹೆಂಡತಿಯನ್ನು ವರಿಸಿದ 70 ವರುಷದ ಮಾವ; ಬೇರೊಬ್ಬನನ್ನು ಮದುವೆಯಾದವಳು ಮತ್ತೆ ಸೇರಿದ್ದು ಅದೇ ಮನೆ..!!

- Advertisement -
- Advertisement -

70 ರ ಮಾವ 28 ರ ಸೊಸೆಯನ್ನು ಮದುವೆಯಾದ ಘಟನೆ ಉತ್ತರ ಪ್ರದೇಶದ ಕೊಟ್ವಾಲಿ ಪ್ರದೇಶದಲ್ಲಿ ನಡೆದಿದೆ. ಗೋರಖ್‌ಪುರ ಜಿಲ್ಲೆಯಲ್ಲಿ ಈ ವಿಶಿಷ್ಟ ಪ್ರಕರಣ ಬೆಳಕಿಗೆ ಬಂದಿದೆ.

70 ವರ್ಷದ ಮಾವ ತನ್ನ 28 ವರ್ಷದ ಸೊಸೆಯನ್ನು ದೇವಸ್ಥಾನದಲ್ಲಿ ಮದುವೆಯಾಗಿದ್ದಾನೆ. ಇಬ್ಬರ ಮದುವೆಯ ಫೋಟೋಗಳೂ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿವೆ.

ಕೊಟ್ವಾಲಿ ಪ್ರದೇಶದ ಛಾಪಿಯಾ ಉಮ್ರಾವ್ ಗ್ರಾಮದಲ್ಲಿ ನಡೆದಿದೆ. ಇಲ್ಲಿನ ನಿವಾಸಿ 70 ವರ್ಷದ ಕೈಲಾಶ್ ಯಾದವ್ ಎಂಬವರು 28 ವರ್ಷದ ಸೊಸೆ ಪೂಜಾ ಅವರೊಂದಿಗೆ ದೇವಸ್ಥಾನದಲ್ಲಿ ವಿವಾಹವಾಗುತ್ತಿರುವ ಚಿತ್ರ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ. ಈ ವಿಚಾರ ಕ್ಷೇತ್ರದಲ್ಲಿ ಚರ್ಚೆಗೆ ಗ್ರಾಸವಾಗಿದೆ. ಸದ್ಯ ಮುದುಕನನ್ನೇ ಮದುವೆಯಾದ ಸೊಸೆ ಸಪ್ತಪದಿ ತುಳಿದು ತವರು ಮನೆಯಲ್ಲಿ ನೆಮ್ಮದಿಯಿಂದ ಜೀವನ ನಡೆಸುತ್ತಿದ್ದಾರೆ.

ಕೈಲಾಶ್ ಯಾದವ್ ಬದಲ್‌ಗಂಜ್ ಪೊಲೀಸ್ ಠಾಣೆಯಲ್ಲಿ ವಾಚ್‌ಮನ್ ಆಗಿ ಕೆಲಸ ಮಾಡುತ್ತಿದ್ದಾರೆ. ಅವರ ಪತ್ನಿ 12 ವರ್ಷಗಳ ಹಿಂದೆ ಮೃತಪಟ್ಟಿದ್ದಾರೆ. ಕೈಲಾಶ್ ಅವರ ನಾಲ್ವರು ಮಕ್ಕಳಲ್ಲಿ ಮೂರನೇ ಮಗ ಅಂದರೆ ಸೊಸೆ ಪೂಜಾ ಅವರ ಪತಿಯೂ ಸಾವನ್ನಪ್ಪಿದ್ದಾರೆ. ಇದಾದ ನಂತರ ಪೂಜಾ ಬೇರೆ ವ್ಯಕ್ತಿಯನ್ನು ಮದುವೆಯಾಗಿದ್ದರು. ಆದರೆ ಸೊಸೆಗೆ ಆತ ಇಷ್ಟವಾಗಿರಲಿಲ್ಲ.

ಇದಾದ ನಂತರ ಸೊಸೆ ಅಲ್ಲಿಂದ ಹೊರಟು ಕೈಲಾಶ್ ಮನೆಗೆ ಬಂದಿದ್ದಾಳೆ. ಈ ವೇಳೆ ಮಾವನಿಗೆ ಸೊಸೆಯ ಮೇಲೆ ಪ್ರೀತಿಯಾಗಿದೆ ಎಂದು ಹೇಳಲಾಗುತ್ತಿದೆ. ನಂತರ ಇಬ್ಬರೂ ವಯಸ್ಸು ಮತ್ತು ಸಮಾಜವನ್ನು ಲೆಕ್ಕಿಸದೆ ಮದುವೆಯಾಗಲು ನಿರ್ಧರಿಸಿದ್ದಾರೆ. ಮಾವ ಮತ್ತು ಸೊಸೆಯ ಮದುವೆಯ ಫೋಟೋ ಅಂತರ್ಜಾಲ ಮಾಧ್ಯಮಗಳಲ್ಲಿ ವೈರಲ್ ಆಗಿದ್ದೆ.

- Advertisement -

Related news

error: Content is protected !!