- Advertisement -
- Advertisement -

ಬೆಂಗಳೂರು: ‘ಧಾರ್ಮಿಕ ಸ್ವಾತಂತ್ರ್ಯ ಹಕ್ಕು ರಕ್ಷಣೆ ವಿಧೇಯಕ 2021’ ವಿಧಾನಸಭೆಯಲ್ಲಿ ಮಂಗಳವಾರದಂದು ಮಂಡಿಸಲಾಗಿದೆ. ಪ್ರತಿ ಪಕ್ಷಗಳು ವಿಧೇಯಕವನ್ನು ವಿರೋಧಿಸಿವೆ.

ಮತಾಂತರ ನಿಷೇಧ ವಿಧೇಯಕದಲ್ಲಿರುವ ಪ್ರಮುಖಾಂಶಗಳು:
- ಒತ್ತಾಯ, ಆಮಿಷ ಒಡ್ಡಿ ಮತಾಂತರ ಮಾಡುವುದಕ್ಕೆ ನಿಷಿದ್ಧ
- ಯಾವುದೇ ರೀತಿಯ ಉಡುಗೊರೆ, ಹಣ ನೀಡಿ ಮತಾಂತರಗೊಳಿಸುವಂತಿಲ್ಲ
- ಪ್ರತಿಷ್ಠಿತ ಶಾಲೆಯಲ್ಲಿ ಉಚಿತ ಶಿಕ್ಷಣದ ಭರವಸೆ
- ಪ್ರತಿಷ್ಠಿತ ಸಂಸ್ಥೆಗಳಲ್ಲಿ ಉದ್ಯೋಗದ ಆಮಿಷ ಒಡ್ಡುವಂತಿಲ್ಲ
- ಶಿಕ್ಷಣ ಸಂಸ್ಥೆ, ಅನಾಥಾಶ್ರಮ, ವೃದ್ಧಾಶ್ರಮ, ಆಸ್ಪತ್ರೆ
- ಧಾರ್ಮಿಕ ಮಿಷನರಿ, ಎನ್ಜಿಒಗಳು
- ಒಂದು ಅಥವಾ ಹೆಚ್ಚು ಮಂದಿಯ ಸಾಮೂಹಿಕ ಮತಾಂತರದಲ್ಲಿ ತೊಡಗಿದರೆ ಅಂತಹ ಸಂಸ್ಥೆಗಳಿಗೆ ಸರ್ಕಾರದ ಅನುದಾನ ಕಡಿತವಾಗಲಿದೆ
- ಅಪ್ರಾಪ್ತ ವಯಸ್ಕರು, ಪರಿಶಿಷ್ಟ ಜಾತಿ, ಪಂಗಡದವರನ್ನು ಮತಾಂತರ ಮಾಡಿದ್ರೆ ಕನಿಷ್ಠ 3ರಿಂದ 10 ವರ್ಷ ಜೈಲು ಶಿಕ್ಷೆ, 50,000 ರೂ. ದಂಡ
- ಸಾಮೂಹಿಕ ಮತಾಂತರ ಮಾಡಿದ್ರೆ 3ರಿಂದ 10 ವರ್ಷ ಜೈಲು 1 ಲಕ್ಷ ರೂ ದಂಡ
- ಮದುವೆಯಾಗುವ ಭರವಸೆಯ ಮೂಲಕ ನಡೆಸುವ ಮತಾಂತರಕ್ಕೆ ನಿಷೇಧ
- ಮತಾಂತರಗೊಂಡ ವ್ಯಕ್ತಿಯ ಪೋಷಕರು, ಸಹೋದರ, ಸಹೋದರಿ ದೂರನ್ನು ನೀಡಿದರೆ ಎಫ್ ಐಆರ್ ದಾಖಲಿಸುವ ಅವಕಾಶವಿದೆ
- ಬಲವಂತದ ಮತಾಂತರಕ್ಕೆ ಮೂರು ವರ್ಷದಿಂದ ಐದು ವರ್ಷಗಳವರೆಗೆ ಜೈಲು ಶಿಕ್ಷೆ
- ಇಪ್ಪತ್ತೈದು ಸಾವಿರ ರೂಪಾಯಿಗಳ ದಂಡ ವಸೂಲಾತಿಗೆ ಅವಕಾಶವಿದೆ
- ಅಪ್ರಾಪ್ತರು, ಬುದ್ದಿಮಾಂದ್ಯ ವ್ಯಕ್ತಿಗಳು, ಸೇರಿದ ವ್ಯಕ್ತಿಯ ಬಲವಂತದ ಮತಾಂತರಕ್ಕೆ ಮೂರು ವರ್ಷದಿಂದ ಹತ್ತು ವರ್ಷಗಳ ವರೆಗೆ ಜೈಲು ಶಿಕ್ಷೆಗೆ ಕಾಯ್ದೆಯಲ್ಲಿ ಅವಕಾಶವಿದೆ



- Advertisement -








