Wednesday, June 24, 2026
spot_imgspot_img
spot_imgspot_img

ಮಲ್ಲಿಕಾರ್ಜುನ ಖರ್ಗೆ ಇಂದು ಅಧಿಕಾರ ಸ್ವೀಕಾರ

- Advertisement -
- Advertisement -

ನವದೆಹಲಿ: ಕಾಂಗ್ರೆಸ್ ಅಧ್ಯಕ್ಷ ಗಾದಿಯ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಮಲ್ಲಿಕಾರ್ಜುನ ಖರ್ಗೆ ಅವರು ಇಂದು ಅಧಿಕಾರ ವಹಿಸಿಕೊಳ್ಳಲಿದ್ದು, ನವದೆಹಲಿಯಲ್ಲಿರುವ ಅಖಿಲ ಭಾರತ ಕಾಂಗ್ರೆಸ್ ಸಮಿತಿ (ಎಐಸಿಸಿ) ಪ್ರಧಾನ ಕಚೇರಿಯಲ್ಲಿ ಇದಕ್ಕಾಗಿ ಭರದ ಸಿದ್ಧತೆಗಳು ನಡೆದಿವೆ.

ಪಕ್ಷದ ನಿರ್ಗಮಿತ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಖರ್ಗೆ ಅವರಿಗೆ ಅಧಿಕಾರ ಹಸ್ತಾಂತರಿಸಲಿದ್ದಾರೆ.

137 ವರ್ಷಗಳ ಇತಿಹಾಸ ಹೊಂದಿರುವ ಕಾಂಗ್ರೆಸ್‌ ಪಕ್ಷದ ಸಂಕ್ರಮಣ ಕಾಲದಲ್ಲಿ ಹಾಗೂ 24 ವರ್ಷಗಳ ಬಳಿಕ ನೆಹರೂ-ಗಾಂಧಿ ಕುಟುಂಬದ ಹೊರಗಿನವರೊಬ್ಬರು ಪಕ್ಷದ ಅತ್ಯುನ್ನತ ಹುದ್ದೆಯನ್ನು ಅಲಂಕರಿಸುತ್ತಿದ್ದಾರೆ.

ಕಾರ್ಯಕ್ರಮದಲ್ಲಿ ಕಾಂಗ್ರೆಸ್‌ನ ಚುನಾವಣಾ ಪ್ರಾಧಿಕಾರದ ಅಧ್ಯಕ್ಷ ಮಧುಸೂದನ ಮಿಸ್ತ್ರಿ ಅವರು ಚುನಾವಣೆಯಲ್ಲಿ ಆಯ್ಕೆಯಾಗಿರುವ ಪ್ರಮಾಣಪತ್ರವನ್ನು ಖರ್ಗೆ ಅವರಿಗೆ ಹಸ್ತಾಂತರಿಸಲಿದ್ದಾರೆ. ಈ ವೇಳೆ ಪಕ್ಷದ ನಾಯಕ ರಾಹುಲ್‌ ಗಾಂಧಿ ಉಪಸ್ಥಿತರಿರಲಿದ್ದಾರೆ.

ಪಕ್ಷದ ಅತ್ಯುನ್ನತ ಹುದ್ದೆಗೆ ನಡೆದ ಚುನಾವಣೆಯಲ್ಲಿ ಖರ್ಗೆ ಅವರು ಸಂಸದ ಶಶಿ ತರೂರ್ ಅವರನ್ನು ಮಣಿಸಿದ್ದರು.

- Advertisement -

Related news

error: Content is protected !!