Tuesday, July 1, 2025
spot_imgspot_img
spot_imgspot_img

ಮಹಿಳೆ ಮೇಲೆ ಹಲ್ಲೆ ನಡೆಸಿ, ಚಲಿಸುತ್ತಿರುವ ಕಾರಿನಲ್ಲಿ ರಸ್ತೆ ಮೇಲೆ ಎಳೆದೊಯ್ದ ದುಷ್ಕರ್ಮಿಗಳು..!

- Advertisement -
- Advertisement -

ನವದೆಹಲಿ: ಮಹಿಳೆ ಮೇಲೆ ಇಬ್ಬರು ವ್ಯಕ್ತಿಗಳು ಹಲ್ಲೆ ನಡೆಸಿ ಚಲಿಸುತ್ತಿರುವ ಕಾರಿನಲ್ಲಿ ಆಕೆಯನ್ನು ಎಳೆದೊಯ್ದ ಪರಿಣಾಮ ಆಕೆ ರಸ್ತೆ ಮೇಲೆ ಬಿದ್ದು ಗಾಯಗೊಂಡ ಅಮಾನುಷ ಘಟನೆ ರಾಷ್ಟ್ರ ರಾಜಧಾನಿಯಲ್ಲಿ ನಡೆದಿದೆ.

ದೆಹಲಿಯ ಅಮರ್ ಕಾಲೋನಿಯಲ್ಲಿ ಘಟನೆ ನಡೆದಿದ್ದು, ಪತ್ರಕರ್ತರೊಬ್ಬರು ಈ ಘಟನೆ ವೀಡಿಯೋವನ್ನು ಟ್ವೀಟರ್‌ನಲ್ಲಿ ಪ್ರಕಟಿಸಿ ವ್ಯಕ್ತಿಗಳ ವಿರುದ್ದ ಕ್ರಮ ಕೈಗೊಳ್ಳಲು ಪೊಲೀಸರನ್ನು ಒತ್ತಾಯಿಸಿದ್ದಾರೆ.

ಇಬ್ಬರು ಚಾಲಕರ ನಡುವೆ ಜಗಳ ನಡೆಯುತ್ತಿದ್ದಾಗ ಖಾಸಗಿ ಕ್ಯಾಬ್‌ನಲ್ಲಿ ಕುಳಿತಿದ್ದ ಮಹಿಳೆ ಮಧ್ಯ ಪ್ರವೇಶಿಸಿದ್ದಾರೆ. ಈ ವೇಳೆ ಕಾರಿನಲ್ಲಿದ್ದವರು ಆಕೆಗೆ ಹೊಡೆದು ಕಾರಿನಿಂದ ಡಿಕ್ಕಿ ಹೊಡೆಸಿದ್ದಾರೆ. ಬಳಿಕ ಕಾರಿನಲ್ಲಿ ಕುಳಿತು ಚಲಿಸುತ್ತಿರುವಾಗಲೇ ಹೊರಗಿನಿಂದ ಮಹಿಳೆಯನ್ನು ಎಳೆದೊಯ್ದಿದ್ದಾರೆ. ಈ ವೇಳೆ ಮಹಿಳೆ ರಸ್ತೆ ಮೇಲೆ ಬಿದ್ದು ಗಾಯಗೊಂಡಿದ್ದಾರೆ. ಮಹಿಳೆಯ ಮೊಣಕೈಗೆ ಗಾಯವಾಗಿದೆ ಎನ್ನಲಾಗಿದೆ.

ಕೆಲವು ವರದಿಗಳ ಪ್ರಕಾರ, ಮಹಿಳೆ ಕ್ಯಾಬ್‌ನಲ್ಲಿ ಸಂಚರಿಸುತ್ತಿದ್ದ ವೇಳೆ ಇಬ್ಬರು ಚಾಲಕರ ನಡುವೆ ಮಾತಿನ ಚಕಮಕಿ ನಡೆಯುತ್ತಿತ್ತು. ಇದನ್ನು ತಡೆಯಲು ಅವರು ಮಧ್ಯ ಪ್ರವೇಶಿಸಿದ್ದಾರೆ. ಇದರಿಂದ ಕುಪಿತಗೊಂಡ ಚಾಲಕರು ಆಕೆ ಮೇಲೆ ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ.

- Advertisement -

Related news

error: Content is protected !!