Sunday, June 29, 2025
spot_imgspot_img
spot_imgspot_img

ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ 7ನೇ ತರಗತಿ ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣು

- Advertisement -
- Advertisement -
vtv vitla

ವಿದ್ಯಾರ್ಥಿನಿಯೊಬ್ಬಳು ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದು, ಮನೆಯಲ್ಲಿ ಯಾರೂ ಇಲ್ಲದ ವೇಳೆ ಆತ್ಮಹತ್ಯೆಗೆ ಶರಣಾಗಿರುವ ದುರ್ಘಟನೆ ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲ್ಲೂಕಿನ ಶಿವರಳ್ಳಿ ಗ್ರಾಮದಲ್ಲಿ ನಡೆದಿದೆ.

ಸೋಮವಾರಪೇಟೆಯ ಖಾಸಗಿ ಶಾಲೆಯ 7 ತರಗತಿ ವಿದ್ಯಾರ್ಥಿನಿ ಜಿತೇಂದ್ರ ಅಕ್ಷತ ದಂಪತಿಯ ಪುತ್ರಿ ವೈಷ್ಣವಿ (13) ಮೃತ ದುರ್ದೈವಿ.

ಹಲವು ದಿನಗಳಿಂದ ಖಿನ್ನತೆಗೆ ಒಳಗಾಗಿದ್ದ ವೈಷ್ಣವಿ ಪರೀಕ್ಷೆ ಆರಂಭವಾದಗಿನಿಂದಲೂ ತೀವ್ರ ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದಳು. ಈ ಬಗ್ಗೆ ಮನೆಯವರು ಕೇಳಿದ್ದರೂ ಯಾವುದನ್ನೂ ಹೇಳಿಕೊಂಡಿರಲಿಲ್ಲ ಎಂದು ತಿಳಿದುಬಂದಿದೆ.

ರಜಾ ದಿನವಾದ ಹಿನ್ನೆಲೆಯಲ್ಲಿ ಓದಿಕೊಳ್ಳುವಂತೆ ವಿದ್ಯಾರ್ಥಿನಿ ಒಬ್ಬಳನ್ನೇ ಬಿಟ್ಟು ಪೋಷಕರು ಮನೆಯಿಂದ ಹೊರಗಡೆ ಹೋಗಿದ್ದಾರೆ. ಯಾರೂ ಇಲ್ಲದ ವೇಳೆ ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ವೈಷ್ಣವಿ ಮನೆಯಲ್ಲಿಯೇ ನೇಣು ಬಿಗಿದುಕೊಂಡು ಸಾವನ್ನಪ್ಪಿದ್ದಾಳೆ. ಮಗಳ ಸಾವನ್ನು ನೋಡಿದ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದ್ದು, ಶನಿವಾರಸಂತೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಶನಿವಾರಸಂತೆ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಮರಣೋತ್ತರ ಪರೀಕ್ಷೆ ನಡೆಸುತ್ತಿದೆ. ಶಾಲೆಯಲ್ಲಿ ಕಿರುಕುಳ ನೀಡುತ್ತಿದ್ದರೇ ಅಥವಾ ವಿದ್ಯಾರ್ಥಿನಿ ಯಾವ ಕಾರಣಕ್ಕೆ ಆತ್ಮಹತ್ಯೆಗೆ ಶರಣಾಗಿದ್ದಾಳೆ ಎಂಬ ಸತ್ಯ ಬಯಲಿಗೆ ಬರಲಿದೆ.

- Advertisement -

Related news

error: Content is protected !!