- Advertisement -
- Advertisement -

ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಮುರುಡೇಶ್ವರಕ್ಕೆ ಬಂದಿರುವ ಮೂವರು ಪ್ರವಾಸಿಗರು ಸಮುದ್ರದಲ್ಲಿ ಈಜಲು ಹೋಗಿ ಮುಳುಗುತ್ತಿದ್ದವರನ್ನು ರಕ್ಷಣೆ ಮಾಡಿದ ಘಟನೆ ನಡೆದಿದೆ.
ಅರ್ಜುನ್, ಉಮೇಶ್, ಸೂರ್ಯ ಅವರನ್ನು ರಕ್ಷಣೆ ಮಾಡಲಾಗಿದೆ.


ಶಿವಮೊಗ್ಗದ ಶಿಕಾರಿಪುರದಿಂದ ಮುರುಡೇಶ್ವರ ಪ್ರವಾಸಕ್ಕೆ ಬಂದಿದ್ದ ಪ್ರವಾಸಿಗರು ಸಮುದ್ರದಲ್ಲಿ ಈಜುವಾಗ ಅಲೆಗಳ ರಭಸಕ್ಕೆ ಕೊಚ್ಚಿ ಹೋಗಿದ್ದರು.

ಪ್ರವಾಸಿಗರು ಕೊಚ್ಚಿ ಹೋಗುತ್ತಿರುವುದನ್ನು ಗಮನಿಸಿದ ಲೈಫ್ ಗಾರ್ಡ್ ಸಿಬ್ಬಂದಿ ಹಾಗೂ ಟೂರಿಸ್ಟ್ ಮಿತ್ರ ಸಿಬ್ಬಂದಿ ರಕ್ಷಣೆ ಮಾಡಿದ್ದಾರೆ.



- Advertisement -








