Thursday, June 18, 2026
spot_imgspot_img
spot_imgspot_img

ಮೂಡಬಿದಿರೆ: ಚಾಲಕನ ನಿಯಂತ್ರಣ ತಪ್ಪಿ ಬಸ್‌ ಪಲ್ಟಿ; ಪ್ರಯಾಣಿಕರು ಪ್ರಾಣಾಪಾಯದಿಂದ ಪಾರು

- Advertisement -
- Advertisement -

ಮೂಡುಬಿದಿರೆ: ಖಾಸಗಿ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಗೆ ಉರುಳಿ ಬಿದ್ದ ಘಟನೆ ಬನ್ನಡ್ಕದ ರಾಘವೇಂದ್ರ ಮಠದ ಮುಂಭಾಗದಲ್ಲಿ ಬೆಳಗ್ಗೆ ನಡೆದಿದೆ. ಘಟನೆಯಲ್ಲಿ ಹಲವು ಪ್ರಯಾಣಿಕರು ಸಣ್ಣ ಪುಟ್ಟ ಗಾಯಗಳೊಂದಿಗೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಮಂಗಳೂರಿನಿಂದ ಕಾರ್ಕಳ ಕಡೆಗೆ ಹೋಗುತಿದ್ದ ಖಾಸಗಿ ಬಸ್ ಬನ್ನಡ್ಕದ ರಾಘವೇಂದ್ರ ಮಠದ ಮುಂಭಾಗಕ್ಕೆ ತಲುಪಿದಾಗ ಚಾಲಕನ ನಿಯಂತ್ರಣ ತಪ್ಪಿ ಪಲ್ಪಿಯಾಗಿದೆ.

ಘಟನಾ ಸ್ಥಳಕ್ಕೆ ಮೂಡುಬಿದಿರೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

- Advertisement -

Related news

error: Content is protected !!