ಮೈಸೂರು: ಮೈಸೂರಿನ ಲಲಿತಾದ್ರಿಪುರದಲ್ಲಿ ನಡೆದ ಯುವತಿಯ ಸಾಮೂಹಿಕ ಅತ್ಯಾಚಾರ ಪ್ರಕರಣದ ಆರೋಪಿಗಳು ಯುವತಿಯ ವಿಡಿಯೋವನ್ನು ಸೆರೆ ಹಿಡಿದು, ಮೂರು ಲಕ್ಷ ರೂಪಾಯಿಗೆ ಬೇಡಿಕೆ ಇಟ್ಟಿದ್ದಾರೆ. ಹಣ ನೀಡಿದೇ ಇದ್ರೆ ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್ ಮಾಡುವುದಾಗಿ ಬೆದರಿಕೆಯೊಡ್ಡಿದ್ದಾರೆನ್ನುವ ಮಾಹಿತಿ ಲಭ್ಯವಾಗಿದೆ.
ಮಹಾರಾಷ್ಟ್ರ ಮೂಲದ ವಿದ್ಯಾರ್ಥಿನಿಯೋರ್ವಳು ತನ್ನ ಸ್ನೇಹಿತನ ಜೊತೆಗೆಯಲ್ಲಿ ಚಾಮುಂಡಿಯ ತಪ್ಪಲಿನಲ್ಲಿ ಕುಳಿತಿದ್ದ ವೇಳೆ ಅಲ್ಲಿಗೆ ಬಂದ ಆರು ಮಂದಿ ಕಾಮುಕರು, ಯುವಕನ ಮೇಲೆ ಹಲ್ಲೆ ನಡೆಸಿ, ಯುವತಿಯನ್ನು ನಿರ್ಜನ ಪ್ರದೇಶಕ್ಕೆ ಎಳೆದೊಯ್ದು ಅತ್ಯಾಚಾರವೆಸಗಿದ್ದರು. ಅಲ್ಲದೇ ಯುವತಿಯ ವಿಡಿಯೋ ಮಾಡಿಕೊಂಡು ಹಣಕ್ಕೆ ಬೇಡಿಕೆಯಿಟ್ಟಿದ್ದಾರೆ.
ಕಾಮುಕರು ಸ್ಥಳದಿಂದ ಪರಾರಿಯಾಗುತ್ತಿದ್ದಂತೆಯೇ ಯುವತಿ ಹಾಗೂ ಯುವಕನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಪೊಲೀಸರ ಮುಂದೆ ಸಂತ್ರಸ್ತೆಯ ಸ್ನೇಹಿತ ಹಲವು ಮಾಹಿತಿಯನ್ನು ನೀಡಿದ್ದು, ಯುವತಿಯ ಹೇಳಿಕೆಯನ್ನು ಕೂಡ ಪೊಲೀಸರು ಪಡೆದುಕೊಂಡಿದ್ದಾರೆ.
ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಶಂಕಿತ ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂದು ವರದಿಯಾಗಿದೆ. ಆದರೆ ಈ ಸಂಬಂಧ ಯಾವುದೇ ಅಧಿಕೃತ ಹೇಳಿಕೆ ಬಿಡುಗಡೆಯಾಗಿಲ್ಲ. ಮೊಬೈಲ್ ಟವರ್ ಲೊಕೇಷನ್ ಆಧಾರದಲ್ಲಿ ಶಂಕಿತರನ್ನು ವಶಕ್ಕೆ ಪಡೆಯಲಾಗಿದೆ ಎಂದು ಹೇಳಲಾಗುತ್ತಿದೆ
ಇದನ್ನೂ ಓದಿ: ಡೆತ್ ನೋಟ್ ಬರೆದಿಟ್ಟು ಕಂದಾಯ ನಿರೀಕ್ಷಕ ಆತ್ಮಹತ್ಯೆ
ಈ ಮಧ್ಯೆ ಘಟನೆ ನಡೆದ ಸ್ಥಳಕ್ಕೆ ಎಡಿಜಿಪಿ ಪ್ರತಾಪ್ ರೆಡ್ಡಿ ಭೇಟಿ ನೀಡಿ ಮಾಹಿತಿ ಸಂಗ್ರಹಿಸಿದ್ದಾರೆ. ಆ ನಿರ್ದಿಷ್ಟ ಪ್ರದೇಶದಲ್ಲಿ ಸಮಾಜ ದ್ರೋಹಿಗಳು ಪ್ರತಿದಿನ್ಯ ಮದ್ಯಪಾನ ಮಾಡುತ್ತಿದ್ದರು ಎಂಬ ಅಂಶ ಕೂಡ ಬೆಳಕಿಗೆ ಬಂದಿದೆ.