Saturday, June 28, 2025
spot_imgspot_img
spot_imgspot_img

ಯುವತಿಯ ಅಪಹರಣದ ವದಂತಿ; ಪೊಲೀಸರಿಂದ ಸಿಸಿಟಿವಿ ದೃಶ್ಯಾವಳಿ ಪರಿಶೀಲನೆ

- Advertisement -
- Advertisement -

ಮಡಿಕೇರಿ: ಮಡಿಕೇರಿ ನಗರದಲ್ಲಿ ಯುವತಿಯೊಬ್ಬಳನ್ನು ಕಿಡ್ನ್ಯಾಪ್ ಮಾಡಲಾಗಿದೆ ಎಂಬ ವಿಚಾರ ಆತಂಕ ಸೃಷ್ಟಿಸಿದೆ. ಮಡಿಕೇರಿ ನಗರದ ಹೊರವಲಯದ ಕಮಾನು ಗೇಟ್ ಬಳಿ ಘಟನೆ ನಡೆದಿದ್ದು, ಯುವತಿಯೊಬ್ಬಳನ್ನು ಇನೋವಾ ಕಾರಿನಲ್ಲಿ ಬಲವಂತದಿಂದ ಎಳೆದು ಹಾಕಿಕೊಂಡು ಪರಾರಿಯಾಗಿದ್ದಾರೆ ಎಂದು ಹೇಳಲಾಗಿದೆ.

ಮೂವರು ಯುವಕರು ಮತ್ತು ಓರ್ವ ಯುವತಿಯಿಂದ ಕೃತ್ಯ ನಡೆದಿದೆ ಎನ್ನಲಾಗಿದ್ದು, ಅಂಗಡಿ ಬಳಿ ಯುವತಿ ಏಕಾಂಗಿಯಾಗಿ ಬಂದಿದ್ದ ವೇಳೆ ಅಪಹರಣ ಮಾಡಲಾಗಿದೆ ಎಂದು ಹೇಳಲಾಗಿದೆ.

ಈ ಬಗ್ಗೆ ಸ್ಥಳೀಯರಿಂದ ಮಡಿಕೇರಿ ನಗರ ಪೊಲೀಸರಿಗೆ ಮಾಹಿತಿ ನೀಡಲ್ಪಟ್ಟಿದ್ದು, ಪೊಲೀಸರು ಸ್ಥಳಕ್ಕೆ ಬಂದು ಪರಿಶೀಲನೆ ನಡೆಸಿದ್ದಾರೆ. ಮಡಿಕೇರಿಯಿಂದ ಮೈಸೂರು ರಸ್ತೆಯಲ್ಲಿ ಕಾರು ತೆರಳಿದ್ದು, ಸುಂಟಿಕೊಪ್ಪ ಮತ್ತು ಕುಶಾಲನಗರದಲ್ಲಿ ನಾಕಾಬಂಧಿ ಹಾಕಲಾಗಿದೆ. ಘಟನೆ ಸಂಬಂಧ ಸಿಸಿ ಟಿವಿ ದೃಶ್ಯಾವಳಿಗಳನ್ನು ಮಡಿಕೇರಿ ನಗರ ಪೊಲೀಸರು ಪರಿಶೀಲಿಸುತ್ತಿದ್ದಾರೆ.

vtv vitla
- Advertisement -

Related news

error: Content is protected !!