Tuesday, July 1, 2025
spot_imgspot_img
spot_imgspot_img

ಯೋಧರೊಂದಿಗೆ ದೀಪಾವಳಿ ಹಬ್ಬ ಆಚರಿಸಿದ ಪ್ರಧಾನಿ ಮೋದಿ!

- Advertisement -
- Advertisement -

ಶ್ರೀನಗರ: ಪ್ರಧಾನಮಂತ್ರಿ ನರೇಂದ್ರ ಮೋದಿ ಇಂದು ಜಮ್ಮುವಿನ ರಾಜೌರಿಯಲ್ಲಿ ಲ್ಯಾಂಡ್ ಆಗಿದ್ದಾರೆ. ಅಲ್ಲಿಂದ ನೌಶೇರಾ ವಲಯದ ಗಡಿ ನಿಯಂತ್ರಣ ರೇಖೆಯ ಬಳಿ ಯೋಧರೊಂದಿಗೆ ದೀಪಾವಳಿ ಹಬ್ಬ ಆಚರಣೆ ನಡೆಸಲು ತೆರಳಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಭೇಟಿ ಹಿನ್ನೆಲೆಯಲ್ಲಿ ಸೇನಾ ಮುಖ್ಯಸ್ಥ ಜನರಲ್ ಎಂ.ಎಂ.ನರವಾಣೆ ನಿನ್ನೆಯೇ ಜಮ್ಮುವಿಗೆ ಆಗಮಿಸಿದ್ದು, ಭದ್ರತೆಯನ್ನು ಪರಿಶೀಲಿಸಿದ್ದಾರೆ.

ಪ್ರಧಾನಿ ನರೇಂದ್ರ ಮೋದಿಯವರು ಇಂದು ಬೆಳಗ್ಗೆ 10.30ರ ಹೊತ್ತಿಗೇ ರಾಜೌರಿಯನ್ನು ತಲುಪಿದ್ದಾರೆ. ಹಾಗೇ, ಗಡಿಯಲ್ಲಿರುವ ಔಟ್​ಪೋಸ್ಟ್​ಗೆ ತೆರಳಿ ಅಲ್ಲಿನ ಸೈನಿಕರೊಟ್ಟಿಗೆ ದೀಪಾವಳಿ ಆಚರಿಸಿದ್ದರು.

ಇಂದು ಯೋಧರೊಟ್ಟಿಗೆ ಪ್ರಧಾನಿ ನರೇಂದ್ರ ಮೋದಿ ದೀಪಾವಳಿ ಆಚರಿಸುವ ವೇಳೆ ಮಿಲಿಟರಿಯ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು. ಇನ್ನು ಜಮ್ಮು-ಕಾಶ್ಮೀರದಲ್ಲಿ ಇತ್ತೀಚೆಗೆ ಉಗ್ರರ ವಿರುದ್ಧ ಕಾರ್ಯಾಚರಣೆ ನಡೆಯುತ್ತಲೇ ಇದೆ. ಈ ಕಾರ್ಯಾಚರಣೆ ವೇಳೆ ಹಲವು ಯೋಧರೂ ಮೃತಪಟ್ಟಿದ್ದಾರೆ. 4 ತಿಂಗಳಲ್ಲಿ 14 ಯೋಧರು ಹುತಾತ್ಮರಾಗಿದ್ದಾರೆ. ಅಲ್ಲೀಗ ಇಂಥ ಸನ್ನಿವೇಶ ಇರುವ ಹೊತ್ತಲ್ಲಿ ಪ್ರಧಾನಿ ಮೋದಿ ಭೇಟಿ ನೀಡುತ್ತಿದ್ದು, ಭದ್ರತೆಯನ್ನೂ ಹೆಚ್ಚಿಸಲಾಗಿದೆ. ಇತ್ತೀಚೆಗಷ್ಟೇ ಗೃಹ ಸಚಿವ ಅಮಿತ್​ ಶಾ ಅವರೂ ಕೂಡ ಜಮ್ಮು-ಕಾಶ್ಮೀರ ಪ್ರವಾಸ ಹಮ್ಮಿಕೊಂಡು, ವಿವಿಧ ಅಭಿವೃದ್ಧಿ ಕಾರ್ಯಗಳಿಗೆ ಚಾಲನೆ ನೀಡಿದ್ದರು.

ಪ್ರಧಾನಮಂತ್ರಿ ನರೇಂದ್ರ ಮೋದಿ ಇಂದು ಬೆಳಗ್ಗೆ ದೇಶದ ಜನರಿಗೆ ದೀಪಾವಳಿ ಶುಭಾಶಯ ಕೋರಿದ್ದಾರೆ. ಬೆಳಗ್ಗೆಯೇ ಟ್ವೀಟ್​ ಮಾಡಿರುವ ಅವರು, ದೇಶದ ಜನರಿಗೆ ದೀಪಾವಳಿ ಹಬ್ಬದ ಶುಭಾಶಯಗಳು. ಈ ಬೆಳಕಿನ ಹಬ್ಬವು ನಿಮ್ಮೆಲ್ಲರ ಜೀವನದಲ್ಲಿ ಸಂತೋಷ, ಸಮೃದ್ಧಿ ಮತ್ತು ಅದೃಷ್ಟವನ್ನು ಹೊತ್ತು ತರಲಿ ಎಂದು ನಾನು ಆಶಿಸುತ್ತೇನೆ ಎಂದು ಹೇಳಿದ್ದಾರೆ.

- Advertisement -

Related news

error: Content is protected !!