Sunday, June 29, 2025
spot_imgspot_img
spot_imgspot_img

ರೈಸ್ ಮಿಲ್ ಕಟ್ಟಡ ಕುಸಿದು ನಾಲ್ವರು ಸಾವು, 20 ಮಂದಿ ಗಂಭೀರ ಗಾಯ

- Advertisement -
- Advertisement -

ಮೂರು ಅಂತಸ್ತಿನ ರೈಸ್ ಮಿಲ್ ಕಟ್ಟಡ ಕುಸಿದು ಬಿದ್ದು ನಾಲ್ವರು ಸಾವನ್ನಪ್ಪಿ, 20 ಮಂದಿ ಗಂಭೀರ ಗಾಯಗೊಂಡು,24 ಕಾರ್ಮಿಕರು ಅವಶೇಷಗಳ ಅಡಿಯಲ್ಲಿ ಸಿಲುಕಿಕೊಂಡಘಟನೆ ಹರಿಯಾಣದ ಕರ್ನಾಲ್‌ನಲ್ಲಿ ನಡೆದಿದೆ.

ಕಟ್ಟಡ ಕುಸಿದ ಸಂದರ್ಭದಲ್ಲಿ ಕಟ್ಟಡದೊಳಗೆ ಸುಮಾರು 150 ಜನ ಕಾರ್ಮಿಕರಿದ್ದರು ಎಂದು ವರದಿಗಳು ತಿಳಿಸಿವೆ. ತಕ್ಷಣವೇ ಅಗ್ನಿಶಾಮಕ ದಳ ಪೊಲೀಸ್ ಹಾಗೂ ಆಂಬುಲೆನ್ಸ್ ಸ್ಥಳಕ್ಕೆ ಧಾವಿಸಿದ್ದು, ಕಾರ್ಯಾಚರಣೆ ನಡೆಸಿ ಅವಶೇಷಗಳ ಅಡಿಯಲ್ಲಿ ಸಿಲುಕಿದ್ದವರನ್ನು ಹೊರತೆಗೆದಿದ್ದಾರೆ. ಗಂಭೀರ ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ..

ರಕ್ಷಣಾ ಕಾರ್ಯಾಚರಣೆಗಳು ಮುಂದುವರೆದಿದ್ದು, ಘಟನೆ ಕುರಿತು ತನಿಖೆ ನಡೆಸಲು ಸಮಿತಿ ರಚಿಸಲಾಗುವುದು ಹಾಗೂ ರೈಸ್ ಮಿಲ್ ಮಲೀಕರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಅನೀಶ್ ಯಾದವ್ ತಿಳಿಸಿದರು.

- Advertisement -

Related news

error: Content is protected !!